ಬೆಂಗಳೂರು: ರಾಜ್ಯದ ಘನತೆ, ಅಭಿವೃದ್ಧಿ ಮತ್ತು ಪ್ರಗತಿಗೆ ಕಂಟಕವಾಗಿದ್ದ ಸಂವಿಧಾನ ವಿರೋಧಿ ಅನೈತಿಕ ಪೊಲೀಸ್ ಗಿರಿಗೆ ರಾಜ್ಯದಲ್ಲಿ ಕಡಿವಾಣ ಬಿದ್ದಿದೆ. ಇದರ ಶ್ರೇಯಸ್ಸು ಪೊಲೀಸ್ ಇಲಾಖೆಗೆ ಸಲ್ಲಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಪೊಲೀಸ್ ಸಂಸ್ಮರಣಾ ದಿನಾಚರಣೆಯಲ್ಲಿ ಹುತಾತ್ಮ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗೆ ಸಂತಾಪ ಸಲ್ಲಿಸಿ ಮಾತನಾಡಿದರು. ಪೊಲೀಸ್ ಇಲಾಖೆ ಶಾಂತಿ-ಸುವ್ಯವಸ್ಥೆ ಕಾಪಾಡಿದರೆ ರಾಜ್ಯದ ಅಭಿವೃದ್ಧಿ ಸಾಧ್ಯವಾಗುತ್ತದೆ.
“ಅನೈತಿಕ ಪೊಲೀಸ್ಗಿರಿಗೆ ಕಡಿವಾಣ ಪೊಲೀಸ್ ಇಲಾಖೆ ಶಾಂತಿ-ಸುವ್ಯವಸ್ಥೆ ಕಾಪಾಡಿದರೆ ರಾಜ್ಯದ ಅಭಿವೃದ್ಧಿ ಸಾಧ್ಯ: ಸಿಎಂ”
೧೧೬ ಮಂದಿಗೆ ಅನುಕAಪದ ಕೆಲಸ ನೀಡಿ ಆದೇಶ ಹೊರಡಿಸಿದ್ದೇವೆ. ನಿವೃತ್ತ ಪೊಲೀಸ್ ಆರೋಗ್ಯ ಯೋಜನೆಯ ವೈದ್ಯಕೀಯ ಮರು ಪಾವತಿ ವೆಚ್ಚವನ್ನು ವಾರ್ಷಿಕ ೧ ಲಕ್ಷ ರೂಗಳಿಂದ ೧.೫೦ ಲಕ್ಷಕ್ಕೆ ಹೆಚ್ಚಿಸಲಾಗಿದೆ. ಎಲ್ಲಾ ಪೊಲೀಸ್ ಸಿಬ್ಬಂದಿಯ ಆರೋಗ್ಯ ತಪಾಸಣಾ ವೆಚ್ಚವನ್ನು ೧೦೦೦ ರೂಗಳಿಂದ ೧೫೦೦ ರೂಗೆ ಹೆಚ್ಚಿಸಲಾಗಿದೆ.
