ಗದಗ: ಜಿಲ್ಲೆಯ ಐತಿಹಾಸಿಕ ಗ್ರಾಮ ಲಕ್ಕುಂಡಿಯಲ್ಲಿ ಉತ್ಖನನ ಕಾರ್ಯ ನಡೆಯುತ್ತಿದೆ. ಈಗ ಗ್ರಾಮವನ್ನು ಸ್ಥಳಾಂತರಿಸುವ ಯಾವುದೇ ಪ್ರಸ್ತಾಪವಿಲ್ಲ. ನಡೆಯುತ್ತಿರುವ ಉತ್ಖನನದ ವೇಳೆ ಮಹತ್ವದ ಅವಶೇಷ ಸಿಕ್ಕರೆ ಮುಂದಿನ ನಿರ್ಧಾರ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಸಿ.ಎನ್ ಶ್ರೀಧರ್ ಅವರು ತಿಳಿಸಿದ್ದಾರೆ. ಈ ಮೂಲಕ ಗ್ರಾಮವನ್ನು ಸ್ಥಳಾಂತರಿಸುವ ಮುನ್ಸೂಚನೆ ನೀಡಿದ್ದಾರೆ.
ಜಿಲ್ಲೆಯ ಲಕ್ಕುಂಡಿಯಲ್ಲಿ ಉತ್ಖನನ ಕಾರ್ಯ ನಡೆಯುತ್ತಿರುವ ಭಾಗಕ್ಕೆ ಸಾರ್ವಜನಿಕರ ಪ್ರವೇಶ ಹಾಗೂ ವೀಡಿಯೊ, ಫೋಟೋಗ್ರಫಿ ನಿಷೇಧಿಸಿ ಜಿಲ್ಲಾಡಳಿತ ಆದೇಶ ಹೊರಡಿಸಿದೆ. ಲಕ್ಕುಂಡಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಜಿಲ್ಲಾಧಿಕಾರಿ ಸಿ.ಎನ್ ಶ್ರೀಧರ್ ಈ ಆದೇಶ ಹೊರಡಿಸಿದ್ದಾರೆ. ಪುರಾತತ್ವ ಇಲಾಖೆಯ ಶಿಫಾರಸ್ಸಿನ ಮೇರೆಗೆ ಉತ್ಖನನ ಜಾಗವನ್ನ ಸೂಕ್ಷ÷್ಮ ಪ್ರದೇಶ ಎಂದು ಘೋಷಣೆ ಮಾಡಲಾಗಿದೆ. ಅಲ್ಲದೇ ಉತ್ಖನನ ಕೆಲಸಕ್ಕೆ ತೊಂದರೆಯಾಗದಿರಲಿ ಎನ್ನುವ ಕಾರಣಕ್ಕೆ ಸಾರ್ವಜನಿಕರಿಗೆ ನಿರ್ಬಂಧ ವಿಧಿಸಿ ಆದೇಶ ಹೊರಡಿಸಲಾಗಿದೆ.
ಇಂದು ಸಹ (ಜ.೧೭) ಉತ್ಖನನ ಕಾರ್ಯ ಮುಂದುವರೆಲಿದೆ. ಲಕ್ಕುಂಡಿಯ ಕೋಟೆ ವೀರಭದ್ರೇಶ್ವರ ದೇವಸ್ಥಾನದ ಅಂಗಳದಲ್ಲಿ ಉತ್ಖನನ ನಡೆಯುತ್ತಿದೆ.
ಈ ದೇವಾಲಯದ ೧೦ ಮೀಟರ್ ಸುತ್ತಳತೆ ಜಾಗದಲ್ಲಿ ಉತ್ಖನನ ನಡೆಯುತ್ತಿದೆ. ಶಿವನಿಗೆ ಸಂಬAಧಪಟ್ಟAತಹ ವಸ್ತು ಪತ್ತೆಯಾಗಿದೆ. ಮೊದಲ ದಿನ ಒಂದು ಅಡಿಯಷ್ಟು ಅಗೆದು ಉತ್ಖನನ ನಡೆಸಲಾಗಿತ್ತು. ೨ನೇ ದಿನದ ಉತ್ಖನನ ಕಾರ್ಯ ಆರಂಭಗೊAಡಿದೆ. ಹಂತ ಹಂತವಾಗಿ ಉತ್ಖನನ ಕಾರ್ಯವನ್ನು ಪುರಾತತ್ವ ಇಲಾಖೆ ನಡೆಸುತ್ತಿದೆ.
ಲಕ್ಕುಂಡಿಯಲ್ಲಿ ಉತ್ಖನನದ ವೇಳೆ ನಿಧಿ ಸಿಕ್ಕರೆ ಗ್ರಾಮವೇ ಸ್ಥಳಾಂತರ



