ಕೆ.ಆರ್.ನಗರ: ಪ್ರಜಾಪ್ರಭುತ್ವದ ಮೌಲ್ಯಗಳು ಉಳಿದು ಜನ ತಂತ್ರ ವ್ಯವಸ್ಥೆಗೆ ಜೀವ ಬರಬೇಕಾದರೆ ಮಾಜಿ ಮುಖ್ಯಮಂತ್ರಿಗಳಾದ ಹೆಚ್.ಡಿ.ಕುಮಾರಸ್ವಾಮಿ ಯವರಂತಹ ನಾಯಕರು ಸಂಸತ್ ಪ್ರವೇಶ ಮಾಡಬೇಕು ಎಂದು ವಿಶ್ರಾಂತ ಕುಲಪತಿ ಡಾ.ಕೆ.ಎಸ್.ರಂಗಪ್ಪ ಹೇಳಿದರು.
ಪಟ್ಟಣದಲ್ಲಿರುವ ಜಿಲ್ಲಾ ಬಿಜೆಪಿ ಗ್ರಾಮಾಂತರ ಉಪಾಧ್ಯಕ್ಷ ಹೊಸಹಳ್ಳಿ ವೆಂಕಟೇಶ್ ಅವರ ನಿವಾಸದಲ್ಲಿ ನಡೆದ ಜೆಡಿಎಸ್ ಮತ್ತು ಬಿಜೆಪಿ ಚುನಾವಣಾ ಸಮನ್ವಯ ಸಮಿತಿ ಸಭೆಯಲ್ಲಿ ಮಾತನಾಡಿದ ಅವರು ಹೆಚ್.ಡಿ.ಕುಮಾರಸ್ವಾಮಿಯವರ ಸೇವೆ ದೇಶಕ್ಕೆ ಅಗತ್ಯವಿರುವುದರಿಂದ ಎರಡು ಪಕ್ಷಗಳ ಮುಖಂಡರು ಅತ್ಯಂತ ಜಾಗರೂಕರಾಗಿ ಕೆಲಸ ಮಾಡಬೇಕೆಂದರು.
ಮಂಡ್ಯ ಲೋಕಸಭಾ ಕ್ಷೇತ್ರದಿಂದ ಎನ್ ಡಿ ಎ ಮೈತ್ರಿಕೂಟದ ಅಭ್ಯರ್ಥಿಯಾಗಿ ಸ್ಪರ್ದಿಸಿರುವ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರ ಗೆಲುವಿಗೆ ಪ್ರತಿಯೊಬ್ಬರು ಪ್ರಾಮಾಣಿಕವಾಗಿ ಕೆಲಸ ಮಾಡಬೇಕೆಂದರಲ್ಲದೆ ಸದಾ ಅಧ್ಯಯನಶೀಲರಾಗಿ ಜನರ ಸಂಕಷ್ಠ ಅರಿತಿರುವ ಅಂತಹ ನಾಯಕರ ಅವಶ್ಯಕತೆ ದೇಶಕ್ಕೆ ಅಗತ್ಯವಿದೆ ಎಂದರು.
ಲೋಕಸಭಾ ಚುನಾವಣೆಗೆ ಜೆಡಿಎಸ್ ಮತ್ತು ಬಿಜೆಪಿ ಪಕ್ಷಗಳು ಮೈತ್ರಿ ಮಾಡಿಕೊಂಡಿರುವುದು ಉತ್ತಮ ನಿರ್ಧಾರವಾಗಿದ್ದು ರಾಜ್ಯದ 28 ಕ್ಷೇತ್ರಗಳಲ್ಲಿಯು ಎನ್ ಡಿ ಎ ಮೈತ್ರಿಕೂಟದ ಅಭ್ಯರ್ಥಿಗಳು ಜಯಶಾಲಿಯಾಗುವುದು ನಿಶ್ಚಿತವಾಗಿದ್ದು ಇದು ರಾಜಕೀಯ ಕ್ರಾಂತಿಗೆ ಕಾರಣವಾಗಲಿದೆ ಎಂದು ತಿಳಿಸಿದರು.ಪ್ರಧಾನ ಮಂತ್ರಿ ನರೇಂದ್ರ ಮೋಧಿಯವರು ದೇಶ ಕಟ್ಟುವ ಕಾಯಕವನ್ನು ಪ್ರಾಮಾಣಿಕವಾಗಿ ಮಾಡುತ್ತಿದ್ದು ಅವರ ಕೈ ಬಲಪಡಿಸುವ ಕೆಲಸವನ್ನು ನಾವೆಲ್ಲ ಮಾಡಬೇಕೆಂದರಲ್ಲದೆ ಭಾರತ ದೇಶ ವಿಶ್ವ ಪ್ರಸಿದ್ದಿಯಾಗಬೇಕಾದರೆ ಇಂತಹ ಪ್ರಬಲ ನಾಯಕರು ಮತ್ತೆ ಪ್ರಧಾನಿಗಳಾಗಬೇಕೆಂದರು.
ಮಾಜಿ ಶಾಸಕ ಸಾ.ರಾ.ಮಹೇಶ್ ಅವರಂತಹ ಜನಪರ ನಾಯಕರ ನೇತೃತ್ವದಲ್ಲಿ ಎಲ್ಲರೂ ಒಟ್ಟಾಗಿ ಕೆಲಸ ಮಾಡಿ ಹೆಚ್.ಡಿ.ಕುಮಾರಸ್ವಾಮಿಯವರನ್ನು ಗೆಲ್ಲಿಸಿ ನರೇಂದ್ರ ಮೋಧಿಯವರಂತಹ ಬಲಿಷ್ಠ ನಾಯಕರ ಜತೆ ಸದಾ ಇರೋಣವೆಂದರು.ಜಿಲ್ಲಾ ಗ್ರಾಮಾಂತರ ಬಿಜೆಪಿ ಉಪಾಧ್ಯಕ್ಷ ಹೊಸಹಳ್ಳಿವೆಂಕಟೇಶ್, ಜಿಲ್ಲಾ ಜೆಡಿಎಸ್ ಗ್ರಾಮಾಂತರ ಮಹಿಳಾ ಘಟಕದ ಅಧ್ಯಕ್ಷೆ ದಾಕ್ಷಾಯಿಣಿ, ಪುರಸಭೆ ಸದಸ್ಯರಾದ ಉಮೇಶ್, ಕೆ.ಎಲ್.ಜಗದೀಶ್, ಸಂತೋಷ್ ಗೌಡ, ತಾಲೂಕು ಜೆಡಿಎಸ್ ವಕ್ತಾರ ಕೆ.ಎಲ್.ರಮೇಶ್,ಜಿ. ಪಂ.ಮಾಜಿ ಸದಸ್ಯ ಎಂ.ಟಿ.ಕುಮಾರ್,
ಮೈಮುಲ್ ಮಾಜಿ ಅಧ್ಯಕ್ಷ ಎ.ಟಿ.ಸೋಮಶೇಖರ್, ತಾಲೂಕು ಜೆಡಿಎಸ್ ಪ್ರಧಾನ ಕಾರ್ಯದರ್ಶಿ ಲಾಲನಹಳ್ಳಿಮಹೇಶ್, ಕ್ಷೇತ್ರದ ಚುನಾವಣಾ ಬಿಜೆಪಿ ಸಂಚಾಲಕ ಮಾರ್ಕಂಡೇಯಸ್ವಾಮಿ, ತಾಲೂಕು ಜೆಡಿಎಸ್ ವಕ್ತಾರ ಕೆ.ಎಲ್.ರಮೇಶ್, ಪಿಎಲ್ ಡಿ ಬ್ಯಾಂಕ್ ಮಾಜಿ ಉಪಾಧ್ಯಕ್ಷ ಹೆಚ್.ಬಿ.ಪ್ರಕಾಶ್, ಜೆಡಿಎಸ್ ಜಿಲ್ಲಾ ಸಂಘಟನಾ ಕಾರ್ಯದರ್ಶಿ ಹೆಚ್.ಆರ್.ಮದುಚಂದ್ರ, ಮುಖಂಡರಾದ ಹೆಚ್.ಪಿ.ಶಿವಣ್ಣ, ವೃಷಬೇಂದ್ರ, ವಿ.ಕೃಷ್ಣಶೆಟ್ಟಿ, ತಾಲೂಕು ಬಿಜೆಪಿ ಮಹಿಳಾ ಘಟಕದ ಅಧ್ಯಕ್ಷೆ ದ್ರಾಕ್ಷಾಯಿಣಿ, ನಿವೃತ್ತ ಎಇಇ ಕೆ.ಬಿ.ಪ್ರಕಾಶ್ ಮತ್ತಿತರರು ಇದ್ದರು.