ಮಂಡ್ಯ: ತಾವು ಬಿಜೆಪಿ ಸೇರುವುದಿಲ್ಲ. ಆ ಪಕ್ಷ ಬಯಸಿದರೆ ಲೋಕಸಭಾ ಚುನಾವಣೆಯಲ್ಲಿ ತಮ್ಮ ಪಕ್ಷ ಬೆಂಬಲ ನೀಡಲು ಸಿದ್ದ ಎಂದು ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಮುಖಂಡ ಶಾಸಕ ಜನಾರ್ದನರೆಡ್ಡಿ ಹೇಳಿದ್ದಾರೆ.
ಹನುಮಧ್ವಜ ವಿವಾದ ಸಂಬಂಧ ಕೆರಗೋಡಿಗೆ ಭೇಟಿ ನೀಡಿದ್ದ ಅವರು ಸುದ್ದಿಗಾರರೊಂದಿಗೆ ಮಾತನಾಡಿ, ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದಲ್ಲಿ ಸಾಕಷ್ಟು ಜನಪರ ಕೆಲಸಗಳಾಗಿವೆ.
ಮತ್ತೊಮ್ಮೆ ಮೋದಿ ಪ್ರಧಾನಮಂತ್ರಿಯಾಗಬೇಕು ಎಂಬುದು ಜನರ ಇಚ್ಛೆಯಾಗಿದೆ. ಕೊಪ್ಪಳ ಲೋಕಸಭಾ ಕ್ಷೇತ್ರ ಸೇರಿದಂತೆ ವಿವಿಧೆಡೆ ತಮ್ಮ ಪಕ್ಷ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಗೆ ಬೆಂಬಲ ನೀಡಲಿದೆ ಎಂದು ಹೇಳಿದ್ದಾರೆ.