ಬೆಂಗಳೂರು: ರಾಜ್ಯ ಸಾರಿಗೆ ಸಂಸ್ಥೆಯ ನೌಕರರು ತಮ್ಮ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಇಂದಿನಿAದ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಮುಂದಾಗಿದ್ದಾರೆ. ಇದರಿಂದಾಗಿ ರಾಜ್ಯಾದ್ಯಂತ ಬಸ್ ಸಂಚಾರದಲ್ಲಿ ಏರುಪೇರಾಗುವ ಸಾಧ್ಯತೆಯಿದೆ.ನೌಕರರು ಶೇಕಡಾ 25ರಷ್ಟು ವೇತನ ಹೆಚ್ಚಳಕ್ಕೆ ಪಟ್ಟು ಹಿಡಿದಿದ್ದಾರೆ. ಆದರೆ ಸರ್ಕಾರವು ಕೇವಲ ಶೇಕಡಾ 7ರಷ್ಟು ಹೆಚ್ಚಳ ಮಾಡಲು ಮುಂದಾಗಿದೆ. 2020 ರಿಂದ 2023ರ ವರೆಗಿನ ಸುಮಾರು 38 ತಿಂಗಳ ಹಿಂಬಾಕಿ ಹಣ ಪಾವತಿಸಬೇಕೆಂದು ನೌಕರರು ಆಗ್ರಹಿಸಿದ್ದಾರೆ. ಸರ್ಕಾರವು ಕೇವಲ 18 ರಿಂದ 20 ತಿಂಗಳ ಬಾಕಿ ಹಣ ನೀಡಲು ಒಪ್ಪಿಗೆ ಸೂಚಿಸಿದೆ.2024ರ ಜನವರಿ 1ರಿಂದಲೇ ಅನ್ವಯವಾಗುವಂತೆ ವೇತನ ಪರಿಷ್ಕರಣೆ ಮಾಡಬೇಕೆಂದು ನೌಕರರ ಒಕ್ಕೂಟ ಒತ್ತಾಯಿಸುತ್ತಿದ್ದರೆ,



