ಬೆಂಗಳೂರು: ರಾಜ್ಯದಲ್ಲಿ ಕುತೂಹಲ ಮೂಡಿಸಿದ್ದ ಲೋಕಸಭಾ ಚುನಾವಣೆಯ ಮತ ಎಣಿಕೆ ಕಾರ್ಯ ಇಂದು ನಡೆದಿದ್ದು, ಮಧ್ಯಾಹ್ನದ ವೇಳೆಗೆ ಮತ ಎಣಿಕೆ ಕಾರ್ಯ ಮುಂದುವರಿದಿದ್ದು, ಲಭ್ಯವಾಗಿದ್ದ ಮಾಹಿತಿ ಪ್ರಕಾರ ಒಟ್ಟು 28 ಕ್ಷೇತ್ರಗಳ ಪೈಕಿ 17 ಕ್ಷೇತ್ರಗಳಲ್ಲಿ ಬಿಜೆಪಿ 9 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಎರಡು ಕ್ಷೇತ್ರದಲ್ಲಿ ಜೆಡಿಎಸ್ ಮುಂದಿದೆ.
ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಬಿಜೆಪಿಯಡಾ. ಸಿ.ಎನ್. ಮಂಜುನಾಥ್ ಬೆಳಗಾವಿಯಲ್ಲಿ ಜಗದೀಶ್ ಶೆಟ್ಟರ್, ಧಾರವಾಡದಲ್ಲಿ ಪ್ರಹ್ಲಾದ್ ಜೋಶಿ, ಬೆಂಗಳೂರು ಉತ್ತರದಲ್ಲಿ ಕುಮಾರಿ ಶೋಭಾ ಕರದ್ಲಾಂಜೆ, ದಕ್ಷಿಣದಲ್ಲಿ ತೇಜಸ್ವಿ ಸೂರ್ಯ, ಮೈಸೂರಿನಲ್ಲಿ ಯದುವೀರ್, ಉತ್ತರಕನ್ನಡದಲ್ಲಿ ವಿಶ್ವೇಶ್ವರ ಹೆಗಡೆ ಕಾಗೇರಿ, ಚಿಕ್ಕಬಳ್ಳಾಪುರದಲ್ಲಿ ಡಾ.ಕೆ. ಸುಧಾಕರ್, ಚಿತ್ರದುರ್ಗದಲ್ಲಿ ಗೋವಿಂದ ಕಾರಜೋಳ, ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ ಕೋಟಾ ಶ್ರೀನಿವಾಸ್ ಪೂಜಾರಿ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬ್ರಿಜೇಶ್ ಚೌಟಾ, ಹಾವೇರಿಯಲ್ಲಿ ಬಸವರಾಜ್ ಬೊಮ್ಮಾಯಿ, ಶಿವಮೊಗ್ಗದಲ್ಲಿ ಬಿ.ವೈ ರಾಘವೇಂದ್ರ, ತುಮಕೂರಿನಲ್ಲಿ ವಿ. ಸೋಮಣ್ಣ, ಬಾಗಲಕೋಟೆ ಪಿ.ಸಿ.ಗದ್ದಿಗೌಡರ್, ವಿಜಯಪುರದಲ್ಲಿ ರಮೇಶ್ ಜಿಗಜಣಗಿ ಗೆಲುವಿನ ಹಾದಿಯಲ್ಲಿದ್ದಾರೆ.
ಬೆಳಗಾವಿ ಕ್ಷೇತ್ರದಲ್ಲಿ ಕಾಂಗ್ರೆಸ್ನಪ್ರಿಯಾಂಕ ಜಾರಕಿಹೊಳಿ, ಕೊಪ್ಪಳದಲ್ಲಿ ರಾಜಶೇಖರ್ ಹಿಟ್ನಾಳ್, ಬಳ್ಳಾರಿಯಲ್ಲಿ ತುಕರಾಮ್, ದಾವಣಗೆರೆಯಲ್ಲಿ ಪ್ರಭಾ ಮಲ್ಲಿಕಾರ್ಜುನ್, ಚಾಮರಾಜನಗರದಲ್ಲಿ ಸುನೀಲ್ ಬೋಸ್, ಬೆಂಗಳೂರು ಕೇಂದ್ರದಲ್ಲಿ ಮನ್ಸೂನ್ ಆಲಿ ಖಾನ್, ಹಾಸನದಲ್ಲಿ ಶ್ರೇಯಸ್ ಪಟೇಲ್, ರಾಯಚೂರಿನಲ್ಲಿ ಕುಮಾರ್ ನಾಯ್ಕ್, ಬೀದರ್ನಲ್ಲಿ ಸಾಗರ ಖಂಡ್ರೆ ಮುನ್ನಡೆ ಸಾಧಿಸಿದ್ದಾರೆ.ಮಂಡ್ಯ ಹಾಗೂ ಕೋಲಾರಕ್ಷೇತ್ರದಲ್ಲಿ ಜೆಡಿಎಸ್ನ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ, ಮಲ್ಲೇಶ್ ಬಾಬು ಅವರು ಗೆಲುವು ಸಾಧಿಸಿದ್ದಾರೆ.