ವಾರಣಾಸಿ: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ವಾರಣಾಸಿಯ ಉಮರಹಾದಲ್ಲಿ ಹೊಸದಾಗಿ ನಿರ್ಮಿಸಲಾದ ಸ್ವರ್ವೇದ್ ಮಹಾಮಂದಿರಕ್ಕೆ ಭೇಟಿ ನೀಡಿ ನೂತನವಾಗಿ ನಿರ್ಮಿಸಿರುವ ದೇವಾಲಯದ ಕಟ್ಟಡವನ್ನು ಉದ್ಘಾಟಿಸಿದ್ದಾರೆ.
ಸುಮಾರು 20 ಸಾವಿರ ಕೋಟಿ ರೂಪಾಯಿಗಳ 37 ಅಭಿವೃದ್ಧಿ ಯೋಜನೆಗಳಿಗೆ ಚಾಲನೆ ನೀಡಿದ್ದಾರೆ. ಈ ಕಾರ್ಯಕ್ರಮದಲ್ಲಿ ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಕೂಡ ಭಾಗಿಯಾಗಿದ್ದರು.
ಪ್ರಧಾನಿ ನರೇಂದ್ರ ಮೋದಿ ಅವರು ದೇಶದ ಎರಡು ಪ್ರಮುಖ ಧಾರ್ಮಿಕ ಸ್ಥಳಗಳನ್ನು ಸಂಪರ್ಕಿಸುವ ಬನಾರಸ್ ಮತ್ತು ಕನ್ಯಾಕುಮಾರಿ ನಡುವೆ ಹೊಸ ರೈಲಿಗೆ ಚಾಲನೆ ನೀಡಲಿದ್ದಾರೆ.