ತುಮಕೂರು: ನಂದಿ ಧ್ವಜ ಪೂಜೆ ಮಾಡುವ ಮೂಲಕ ತುಮಕೂರು ದಸರಾವನ್ನು ಗೃಹಸಚಿವ ಜಿ.ಪರಮೇಶ್ವರ್ ಉದ್ಘಾಟಿಸಿದರು. ತುಮಕೂರು ನಗರದ ಜೂನಿಯರ್ ಕಾಲೇಜು ಮೈದಾನದಲ್ಲಿ ನಡೆಯುತ್ತಿರುವ ದಸರಾ ಕಾರ್ಯಕ್ರಮದಲ್ಲಿ ದಸರಾ ಧ್ವಜಾರೋಹಣ ಮಾಡಿ, ಬಳಿಕ ಧಾರ್ಮಿಕ ಮಂಟಪವನ್ನು ಉದ್ಘಾಟನೆ ಮಾಡಿದರು.
ಈ ಸಂದರ್ಭದಲ್ಲಿ ಪತ್ನಿ ಕನ್ನಿಕಾ ಪರಮೇಶ್ವರ್, ಕೇಂದ್ರ ಸಚಿವ ವಿ ಸೋಮಣ್ಣ, ಶಾಸಕ ಜ್ಯೋತಿಗಣೇಶ್, ಸುರೇಶ್ ಗೌಡ, ಸಿದ್ದಗಂಗಾ ಮಠಾಧ್ಯಕ್ಷ ಶ್ರೀ ಸಿದ್ದಲಿಂಗ ಸ್ವಾಮೀಜಿ, ಹನುಮಂತನಾಥ ಸ್ವಾಮೀಜಿ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.