ಹನ್ನೆರಡನೇ ಶತಮಾನದಲ್ಲಿ ಶರಣರು, ಅನುಭವ ಮಂಟಪ ಮತ್ತು ಬಸವಣ್ಣ ಎನ್ನುವುದು ಎಷ್ಟು ಆಕರ್ಷಕವಾಗಿತ್ತು. ಇಂತಹ ಅಂಶಗಳನ್ನು ಸಂಶೋಧನೆ ನಡೆಸಿ ಶರಣರ ಶಕ್ತಿ ಎನ್ನುವ ಚಿತ್ರವೊಂದು ಪೋಸ್ಟ್ ಪ್ರೊಡಕ್ಷನ್ ಕೆಲಸದಲ್ಲಿ ಬ್ಯುಸಿ ಇದೆ. ತಡಿವ್ಯರ ನೋಡು ಎಂಬ ಅಡಿಬರಹವಿದೆ.
ಪ್ರಚಾರದ ಮೊದಲ ಹಂತವಾಗಿ ಬಸವ ಜಯಂತಿ ಮುನ್ನ ದಿನದಂದು ಹಾಡು ಬಿಡುಗಡೆ ಕಾರ್ಯಕ್ರಮ ಅದ್ದೂರಿಯಾಗಿ ರೇಣುಕಾಂಬ ಸ್ಟುಡಿಯೋದಲ್ಲಿ ನಡೆಯಿತು. ಎಲ್ಲಾ ಕಲಾವಿದರುಗಳು ಪಾತ್ರಧಾರಿಗಳಾಗಿ ವೇದಿಕೆ ಹಂಚಿಕೊಂಡಿದ್ದು ವಿಶೇಷವಾಗಿತ್ತು.
ಶ್ರೀಷ ಫಿಲಂಸ್ ಅಡಿಯಲ್ಲಿ ಆರಾಧನಾ ಕುಲಕರ್ಣಿ ಬಂಡವಾಳ ಹೂಡುವ ಜತೆಗೆ ಅಕ್ಕ ನಾಗಮ್ಮನ ಪಾತ್ರಕ್ಕೆ ಬಣ್ಣ ಹಚ್ಚಿದ್ದಾರೆ. ಡಾ.ರಾಜ್ಕುಮಾರ್ ಸಂಸ್ಥೆಯ ವಜ್ರೇಶ್ವರಿ ಕಂಬೈನ್ಸ್ದಲ್ಲಿ ಕೆಲಸ ಮಾಡಿರುವ ದಿಲೀಪ್ ಶರ್ಮ ಸಿನಿಮಾಕ್ಕೆ ರಚನೆ, ಚಿತ್ರಕಥೆ, ಸಂಭಾಷಣೆ, ನಿರ್ದೇಶನ ಅಲ್ಲದೆ ಒಂದು ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.