ಬೆಂಗಳೂರು: ನಿರ್ಮಾಪಕ ಉಮಾಪತಿ ವಿರುದ್ಧ ನಟ ದರ್ಶನ್ ಅಭಿಮಾನಿಗಳನ್ನು ಪ್ರಚೋದಿಸುತ್ತಿದ್ದ ಆರೋಪಿಯನ್ನು ಬಸವೇಶ್ವರ ನಗರ ಪೊಲೀಸರು ಬಂಧಿಸಿದ್ದಾರೆ.
ದರ್ಶನ್ ಅಭಿಮಾನಿ ಚೇತನ್ ಬಂಧಿತ ಆರೋಪಿಯಾಗಿದ್ದು, ಆತನ ವಿರುದ್ಧ ಐಪಿಸಿ ಸೆಕ್ಷನ್ 504, 506 ಅಡಿ ಎಫ್ಐಆರ್ ದಾಖಲಿಸಲಾಗಿದೆ.ಸೋಷಿಯಲ್ ಮೀಡಿಯಾದಲ್ಲಿ ನಿರ್ಮಾಪಕ ಉಮಾಪತಿಗೆ ಬೆದರಿಕೆ ಹಾಕಿದ್ದಲ್ಲದೇ,
ಅವಹೇಳನಕಾರಿಯಾಗಿ ನಿಂದಿಸಿ ದರ್ಶನ್ ಅಭಿಮಾನಿಗಳಿಗೆ ಪ್ರಚೋದನೆ ಮಾಡಿರುವ ಚೇತನ್ ವಿರುದ್ಧ ನಿರ್ಮಾಪಕ ಉಮಾಪತಿ ದೂರು ನೀಡಿದ್ದರು. ಈ ಸಂಬಂಧ ಬಸವೇಶ್ವರನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.