ಬೆಂಗಳೂರು: ಮಿತವ್ಯಯದ ಬಗ್ಗೆ ರಾಷ್ಟ್ರದ ಜನತೆ ಪ್ರಧಾನಿಯವರು ಸಲಹೆ ಮಾಡಿದ್ದ ಬೆನ್ನಲ್ಲೇ ಪೆಟ್ರೋಲ್ ಡಿಸೇಲ್ ದರವನ್ನು ಹೆಚ್ಚಳ ಮಾಡಲಾಗಿದೆ. ಈಗಾಗಲೇ ದಿನನಿತ್ಯ ಬಳಕೆಯ ವಸ್ತುಗಳ ಬೆಲೆ ಹೆಚ್ಚಳವಾಗಿರುವ ಬೆನ್ನಲ್ಲೇ ಡಿಸೇಲ್, ಪೆಟ್ರೋಲ್ ಬೆಲೆ ಹೆಚ್ಚಿಸಿರುವುದು ಗ್ರಾಹಕರ ಜೇಬಿಗೆ ಕತ್ತರಿಬಿದ್ದಂತಾಗಿದೆ. ಇಂದು ಪೆಟ್ರೋಲ್ ಡಿಸೇಲ್ಗಾಗಿ ಬಂದ ಗ್ರಾಹಕರು ಪೆಟ್ರೋಲ್ ಬಂಕ್ ಮುಂದೆ ಸರ್ಕಾರಕ್ಕೆ ಹಿಡಿ ಶಾಪ ಹಾಕುತ್ತಿದ್ದುದ್ದು ಕಂಡುಬಂದಿತ್ತು.ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಯುದ್ಧದಿಂದಾಗಿ ಈ ಬೆಲೆ ಹೆಚ್ಚಳ ಮಾಡಲಾಗಿದೆ ಎಂದು ಹೇಳಲಾಗುತ್ತಿದೆ. ದೇಶದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ಲೀಟರ್ಗೆ ರೂ.3ರಷ್ಟು ಹೆಚ್ಚಳ ಮಾಡಲಾಗಿದೆ. ನಾಲ್ಕು ವರ್ಷಗಳ ಬಳಿಕ ಸರ್ಕಾರಿ ತೈಲ ಕಂಪನಿಗಳು ಇಂಧನ ದರ ಪರಿಷ್ಕರಣೆಗೆ ಮುಂದಾಗಿರುವುದು ಜನತೆಗೆ ಮತ್ತೊಂದು ಬೆಲೆ ಶಾಕ್ ನೀಡಿದೆ.ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಪೆಟ್ರೋಲ್ ದರವು ರೂ.94.77ರಿಂದ ರೂ.97.77ಕ್ಕೆ ಏರಿಕೆಯಾದರೆ, ಡೀಸೆಲ್ ದರವು ರೂ.89.67ರಿಂದ ರೂ.90.67ಕ್ಕೆ ಹೆಚ್ಚಳವಾಗಿದೆ.ಇಂಡಿಯನ್ ಆಯಿಲ್ ಕಾರ್ಪೊರೇಷನ್, ಭಾರತ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್ ಹಾಗೂ ಹಿಂದೂಸ್ತಾನ್



