ಇಂದು ಗುವಾಹಟಿಯ ಬರ್ಸಾಪರಾ ಕ್ರಿಕೆಟ್ ಸ್ಟೇಡಿಯಂನಲ್ಲಿ ಭಾರತ-ಆಸ್ಟ್ರೇಲಿಯಾ ಮೂರನೇ ಟಿ20 ಪಂದ್ಯ ಆಯೋಜಿಸಲಾಗಿದೆ. ಈ ಪಂದ್ಯದಲ್ಲಿ ಟೀಮ್ ಇಂಡಿಯಾ ನಾಯಕ ಸೂರ್ಯಕುಮಾರ್ ಯಾದವ್ 60 ರನ್ ಗಳಿಸಿದರೆ ನೂತನ ದಾಖಲೆ ನಿರ್ಮಾಣವಾಗಲಿದೆ.
ಆಸ್ಟ್ರೇಲಿಯಾ ವಿರುದ್ಧದ ಟಿ20 ಸರಣಿಯಲ್ಲಿ ಮೊದಲ ಎರಡು ಪಂದ್ಯ ಜಯಿಸಿ 2-0 ಮುನ್ನಡೆ ಪಡೆದುಕೊಂಡಿರುವ ಭಾರತ ಇದೀಗ ತೃತೀಯ ಟಿ20 ಪಂದ್ಯಕ್ಕೆ ಸಜ್ಜಾಗಿದೆ. ಇಂದು ಗುವಾಹಟಿಯ ಬರ್ಸಾಪರಾ ಕ್ರಿಕೆಟ್ ಸ್ಟೇಡಿಯಂನಲ್ಲಿ ಮೂರನೇ ಟಿ20 ಪಂದ್ಯ ಆಯೋಜಿಸಲಾಗಿದೆ.
ಸೂರ್ಯಕುಮಾರ್ ಯಾದವ್ ಇಂದಿನ ಪಂದ್ಯದಲ್ಲಿ 60 ರನ್ ಗಳಿಸಿದರೆ ಟಿ20 ಅಂತರರಾಷ್ಟ್ರೀಯ ಪಂದ್ಯಗಳಲ್ಲಿ 2000 ಅಥವಾ ಅದಕ್ಕಿಂತ ಹೆಚ್ಚು ರನ್ ಗಳಿಸಿದ ಭಾರತೀಯ ಬ್ಯಾಟ್ಸ್ಮನ್ಗಳ ಪಟ್ಟಿಗೆ ಸೇರಲಿದ್ದಾರೆ. ಈ ಮಾದರಿಯ ಕ್ರಿಕೆಟ್ನಲ್ಲಿ 55 ಪಂದ್ಯಗಳನ್ನು ಆಡಿರುವ ಸೂರ್ಯ 3 ಶತಕ ಮತ್ತು 16 ಅರ್ಧ ಶತಕಗಳೊಂದಿಗೆ 1940 ರನ್ ಗಳಿಸಿದ್ದಾರೆ.