ಭಾರತ ಹಾಗೂ ಇಂಗ್ಲೆಂಡ್ ನಡುವಣ ನಾಲ್ಕನೇ ಟೆಸ್ಟ್ ಪಂದ್ಯ ಇಂದಿನಿಂದ ಶುರುವಾಗಲಿದೆ. ರಾಂಚಿಯ ಜೆಎಸ್ಸಿಎ ಇಂಟರ್ನ್ಯಾಶನಲ್ ಸ್ಟೇಡಿಯಂ ಈ ಮಹತ್ವದ ಪಂದ್ಯಕ್ಕೆ ಸಾಕ್ಷಿಯಾಗಲಿದೆ. ಈ ಪಂದ್ಯದಲ್ಲಿ ಭಾರತ ಗೆದ್ದರೆ ಸರಣಿ ವಶಪಡಿಸಿಕೊಳ್ಳಲಿದೆ.
ಅತ್ತ ಇಂಗ್ಲೆಂಡ್ಗೆ ಇದು ಮಾಡು ಇಲ್ಲವೇ ಮಡಿ ಪಂದ್ಯವಾಗಿದೆ. ರಾಜ್ಕೋಟ್ನಲ್ಲಿ ನಡೆದ ಮೂರನೇ ಟೆಸ್ಟ್ನಲ್ಲಿ ಇಂಗ್ಲೆಂಡ್ ವಿರುದ್ಧ 434 ರನ್ಗಳಿಂದಗೆದ್ದ ಭಾರತ ಇದೀಗ ಮತ್ತೊಂದು ಮಹತ್ವದ ಪಂದ್ಯಕ್ಕೆ ಸಜ್ಜಾಗಿದೆ. ರಾಂಚಿಯ ಜೆಎಸ್ಸಿಎ ಇಂಟರ್ನ್ಯಾಶನಲ್ ಸ್ಟೇಡಿಯಂ ಕಾಂಪ್ಲೆಕ್ಸ್ನಲ್ಲಿ ಇಂದು ಇಂಡೋ-ಇಂಗ್ಲೆಂಡ್ ನಾಲ್ಕನೇ ಟೆಸ್ಟ್ ಆರಂಭವಾಗಲಿದೆ.
ಸದ್ಯ ಐದು ಪಂದ್ಯಗಳ ಸರಣಿಯಲ್ಲಿ ಟೀಮ್ ಇಂಡಿಯಾ 2-1 ಮುನ್ನಡೆ ಸಾಧಿಸಿದೆ. ಹೀಗಾಗಿ ಈ ಟೆಸ್ಟ್ ಪಂದ್ಯವನ್ನು ಗೆದ್ದರೆ, ಭಾರತವು ಸರಣಿಯನ್ನು ವಶಪಡಿಸಿಕೊಳ್ಳಲಿದೆ. ರೋಹಿತ್ ಸೇನೆ ಈ ಪಂದ್ಯವನ್ನೂ ಗೆಲ್ಲಲೇಬೇಕೆಂಬ ಹಠದಲ್ಲಿದೆ. ಇದಕ್ಕಾಗಿ ಕಠಿಣ ಅಭ್ಯಾಸ ಕೂಡ ನಡೆಸುತ್ತಿದೆ. ಇದು ಇಂಗ್ಲೆಂಡ್ಗೆ ಮಾಡು ಇಲ್ಲವೇ ಮಡಿ ಪಂದ್ಯವಾಗಿದೆ.



