ಯಲಹಂಕ: ದಾಖಲೆಯ ಮೂರನೇ ಬಾರಿಗೆ ಭಾರತದ ಪ್ರಧಾನ ಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ನಮ್ಮೆಲ್ಲರ ಹೆಮ್ಮೆಯ ಪ್ರಧಾನಿ ಶ್ರೀ ನರೇಂದ್ರ ಮೋದಿ ರವರಿಗೆ ಹೃದಯಪೂರ್ವಕ ಅಭಿನಂದನೆಗಳು ಭಾರತ ಎಂದೆಂದಿಗಿಂತಲೂ ಸದೃಢವಾಗಿ ಪ್ರಜ್ವಲಿಸಲು ಮೋದಿ ನಾಯಕತ್ವ ಅವಶ್ಯ, ಮೋದಿ ನಾಯಕತ್ವದಲ್ಲಿ ನಮ್ಮ ದೇಶ ಸುರಕ್ಷಿತವಾಗಲಿರಲಿದೆ ಇಂದು ಬೆಂಗಳೂರು ಉತ್ತರ ಜಿಲ್ಲೆ ಬಿಜೆಪಿ ರೈತ ಮೋರ್ಚ ಜಿಲ್ಲಾಧ್ಯಕ್ಷರಾದ ಜಿ ಜೆ ಮೂರ್ತಿರವರು ಅಭಿಪ್ರಾಯ ವ್ಯಕ್ತಪಡಿಸಿದರು.
ಇದೇ ಸಂದರ್ಭದಲ್ಲಿ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಚುನಾವಣೆಯಲ್ಲಿ ಯಲಹಂಕ ಕ್ಷೇತ್ರದ ಜನಪ್ರಿಯ ಶಾಸಕರಾದ ಎಸ್ ಆರ್ ವಿಶ್ವನಾಥ್ ರವರ ನೇತೃತ್ವದಲ್ಲಿ ಮಾದನಾಯಕನಹಳ್ಳಿ ನಗರ ಸಭೆ ವ್ಯಾಪ್ತಿ ಯಲ್ಲಿ ಬಿಜೆಪಿಗೆ ಅತ್ಯಧಿಕ ಮತಗಳ ಮುನ್ನಡೆ ನೀಡಿದ ಕ್ಷೇತ್ರದ ಎಲ್ಲಾ ಮತದಾರ ಬಂಧುಗಳಿಗೆ ಧನ್ಯವಾದ ಅರ್ಪಿಸಿದರು. ನರೇಂದ್ರ ಮೋದಿ ಮೂರನೇ ಬಾರಿಗೆ ಪ್ರಮಾಣವಚನ ಸ್ವೀಕರಿಸುತ್ತಿದ್ದಂತೆ ತಮ್ಮ ಬೆಂಬಲಿಗರೊಂದಿಗೆ ಜಯಗೋಷ ಮೊಳಗಿಸಿ ಪಟಾಕಿ ಸಿಡಿಸಿ ಸಿಹಿ ಹಂಚಿ ಸಂಭ್ರಮಿಸಿದರು.
ಜಿಲ್ಲಾ ಪಂಚಾಯಿತಿ ಸದಸ್ಯರಾದ ಉಮಾ ಹನುಮಂತ ರಾಯಪ್ಪ,ರಾಜಣ್ಣ, ಸೋಮಣ್ಣ, ಆದಿ ಭೈರವ, ವೆಂಕಟನರಸಪ್ಪ,ಚಿಕ್ಕಣ್ಣ, ಸೇರಿದಂತೆ ಭಾರತೀಯ ಜನತಾ ಪಾರ್ಟಿ ಕಾರ್ಯಕರ್ತರು ಮುಖಂಡರು ಸಂಭ್ರಮಾಚರಣೆಯಲ್ಲಿ ಭಾಗಿಯಾಗಿದ್ದರು.