ಗ್ಲಾ÷್ಯಸ್ಗೋ: ಜುಲೈ 23 ರಿಂದ ಶುರುವಾಗಿರುವ 20ನೇ ಕಾಮನ್ವೆಲ್ತ್ ಕ್ರೀಡಾಕೂಟದಲ್ಲಿ ಭಾರತೀಯ ಕ್ರೀಡಾಪಟುಗಳು ಈವರೆಗೆ 10 ಪದಕಗಳನ್ನು ಗೆದ್ದಿದ್ದಾರೆ. ಈ ಹತ್ತು ಪದಕಗಳಲ್ಲಿ 2 ಚಿನ್ನ, 5 ಬೆಳ್ಳಿ ಹಾಗೂ 3 ಕಂಚಿನ ಪದಕಗಳು ಸೇರಿವೆ. ಈ ಪದಕಗಳೊಂದಿಗೆ ಸದ್ಯ ಕಾಮನ್ವೆಲ್ತ್ ಗೇಮ್ಸ್ ಮೆಡಲ್ ಟೇಬಲ್ನಲ್ಲಿ ಭಾರತ 8ನೇ ಸ್ಥಾನ ಅಲಂಕರಿಸಿದೆ. ಸ್ಕಾಟ್ಲ್ಯಾಂಡ್ನ ಗ್ಲಾಸ್ಗೋದಲ್ಲಿ ನಡೆಯುತ್ತಿರುವ 2026ರ ಕಾಮನ್ವೆಲ್ತ್ ಗೇಮ್ಸ್ನಲ್ಲಿ
ಭಾರತೀಯ ಕ್ರೀಡಾಪಟುಗಳು ಅದ್ಭುತ ಪ್ರದರ್ಶನವನ್ನು ಮುಂದುವರಿಸಿದ್ದಾರೆ. ಕ್ರೀಡಾಕೂಟದ ಆರಂಭಿಕ ದಿನಗಳಲ್ಲೇ ಭಾರತವು 2 ಚಿನ್ನ, 5 ಬೆಳ್ಳಿ ಹಾಗೂ 3 ಕಂಚು ಸೇರಿದಂತೆ ಒಟ್ಟು 10 ಪದಕಗಳನ್ನು ತನ್ನ ಮುಡಿಗೇರಿಸಿಕೊಂಡಿದೆ. ವೇಟ್ಲಿಫ್ಟಿಂಗ್ ಮತ್ತು ಪ್ಯಾರಾ ಅಥ್ಲೆಟಿಕ್ಸ್ ವಿಭಾಗಗಳಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿರುವ ಭಾರತೀಯ ಕ್ರೀಡಾಪಟುಗಳು ದೇಶದ ಕೀರ್ತಿ ಪತಾಕೆಯನ್ನು ಮುಗಿಲೆತ್ತರಕ್ಕೆ ಹಾರಿಸಿದ್ದಾರೆ.
2 ಚಿನ್ನ, 5 ಬೆಳ್ಳಿ, 3 ಕಂಚಿನ ಪದಕ ಗೆದ್ದ ಭಾರತ



