ದೇವನಹಳ್ಳಿ: ತಾಲೂಕಿನ ವಿವಿಧ ಸರ್ಕಾರಿ ಕಚೇರಿಗಳು ಶಾಲಾ ಕಾಲೇಜುಗಳು 75 ನೆಯ ಗಣರಾಜ್ಯೋತ್ಸವವನ್ನು ಆಚರಿಸಲಾಯಿತು.
ಪಟ್ಟಣದ ದೇವನಹಳ್ಳಿ ಕ್ರೀಡಾಂಗಣದಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲಾ ಆಡಳಿತ ಜಿಲ್ಲಾ ಪಂಚಾಯತಿ ವತಿಯಿಂದ ಹಮ್ಮಿಕೊಂಡಿದ್ದ 75ನೇ ಗಣರಾಜ್ಯೋತ್ಸವ ಧ್ವಜಾರೋಹಣ ನೆರವೇರಿಸಿದ ಉಸ್ತುವಾರಿ ಸಚಿವ ಕೆ ಎಚ್ ಮುನಿಯಪ್ಪ ಮಾತನಾಡಿ,
ಭಾರತದಲ್ಲಿ ಅನೇಕ ಧರ್ಮಗಳು ಸಮುದಾಯಗಳನ್ನು ಎಲ್ಲರಿಗೂ ಗೌರವಹಿತವಾಗಿ ಬದುಕುವ ಅವಕಾಶವನ್ನು ಸಂವಿಧಾನ ಮಾಡಿಕೊಟ್ಟಿದೆ ಭಾರತದ ಮಣ್ಣಿನಲ್ಲಿ ವಾಸಿಸುವ ಸರ್ವರಿಗೂ ಶಕ್ತಿ ತುಂಬುವ ಕೆಲಸಗಳನ್ನು ಡಾಕ್ಟರ್ ಬಿಆರ್ ಅಂಬೇಡ್ಕರ್ ರವರು ಸಂವಿಧಾನದ ಮೂಲಕ ನೀಡುವ ದೇಶದ ಶ್ರೇಷ್ಠತೆಯನ್ನು ನೂರು ಪಟ್ಟು ಹೆಚ್ಚಿಸಿದ್ದಾರೆ ಭಾಷೆಯ ಅನುಗುಣವಾಗಿ ರಾಜ್ಯಗಳ ವಿಂಗಡಣೆಯಾಗಿದ್ದು ಜಗತ್ತಿನ ಜನರು ಭಾರತದ ಸಂವಿಧಾನ ಶ್ರೇಷ್ಠವಾಗಿದೆ ಎಂದರು.
ನಾವು ಚುನಾವಣೆ ಸಂದರ್ಭದಲ್ಲಿ ಐದು ಗ್ಯಾರೆಂಟಿ ಯೋಜನೆಗಳನ್ನು ಅನುಷ್ಠಾನಗೊಳಿಸಲಾಗಿದೆ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಡಾ. ಶಿವಶಂಕರ್, ಜಿಲ್ಲಾ ಪಂಚಾಯಿತಿ ಸಿ ಇ ಓ ಡಾಕ್ಟರ್ ಕೆ ಎನ್ ಅನುರಾಧ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ್ ಬಾಲ ದಂಡಿ, ಅಪರ ಜಿಲ್ಲಾಧಿಕಾರಿ ಅಂಬರೀಶ್ ಹೆಚ್, ಉಪ ಅರಣ್ಯ ಸಂರಕ್ಷಣಾಧಿಕಾರಿ ಸರೀನಾ, ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ರಮೇಶ್,
ಅಪರ ಪೊಲೀಸ್ ಅಧಿಕಾರಿ ಪುರುಷೋತ್ತಮ್, ದೇವನಹಳ್ಳಿ ತಹಸೀಲ್ದಾರ್ ಶಿವರಾಜ್, ತಾಲೂಕ್ ಪಂಚಾಯತಿ ಇ ಓ ಶ್ರೀನಾಥ್ ಗೌಡ, ಜಿಲ್ಲಾ ಪಂಚಾಯತಿ ಮಾಜಿ ಅಧ್ಯಕ್ಷ ಬಿ ರಾಜಣ್ಣ, ಮಾಜಿ ಪುರಸಭಾ ಅಧ್ಯಕ್ಷ ಸಿ ಜಗನ್ನಾಥ್, ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ದ್ಯಾವರಹಳ್ಳಿ ಶಾಂತಕುಮಾರ್, ಉಪಸ್ಥಿತರಿದ್ದರು. ಜಿಲ್ಲಾ ಮಟ್ಟದ ಅಧಿಕಾರಿಗಳು, ತಾಲೂಕು ಮಟ್ಟದ ಅಧಿಕಾರಿಗಳು, ವಿವಿಧ ಕ್ಷೇತ್ರಗಳಿಗೆ ಸಾಧನೆ ಮಾಡಿದ ಸಾಧಕರನ್ನು ಸನ್ಮಾನಿಸಲಾಯಿತು ಜಿಲ್ಲಾ ಮಟ್ಟದ ಸರ್ವೋತ್ತಮ ಸೇವಾ ಪ್ರಶಸ್ತಿ ಆಯ್ಕೆಯಾದ ಅಧಿಕಾರಿಗಳನ್ನು ಸನ್ಮಾನಿಸಲಾಯಿತು.