ಬೆಂಗಳೂರು: ಈ ತಿಂಗಳ 18ರಂದು ನಡೆಯಲಿರುವ ವಿಧಾನಪರಿಷತ್ ಚುನಾವಣೆ ಹಿನ್ನೆಲೆಯಲ್ಲಿ ತಮ್ಮ ಪಕ್ಷದ ಶಾಸಕರನ್ನು ರೆಸಾರ್ಟ್ಗೆ ಕರೆದೊಯ್ಯಲಾಗುತ್ತಿದೆ. ವಿವಿಧ ಪಕ್ಷಗಳ ರಾಜಕೀಯ ಮುಖಂಡರು ತಮ್ಮ ಪಕ್ಷದ ಶಾಸಕರನ್ನು ಬೇರೆ ಪಕ್ಷದವರೊಂದಿಗೆ ಮಾತನಾಡದಂತೆ ನಿರ್ಬಂಧ ಹೇರಲಿದ್ದಾರೆ. ಈಗಾಗಲೇ ರೆಸಾರ್ಟ್ ರಾಜಕಾರಣವನ್ನು ಕಾಂಗ್ರೆಸ್ ಪಕ್ಷ ಹಾಗೂ ಜೆಡಿಎಸ್ ಬಿಜೆಪಿಯವರು ಆರಂಭಿಸಿದ್ದಾರೆ ಎಂದು ಹೇಳಲಾಗುತ್ತಿದೆ.
ಶಾಸಕರ ರೆಸಾರ್ಟ್ ಪ್ರವಾಸವನ್ನು ಸಚಿವ ಸತೀಶ್ ಜಾರಕಿಹೊಳಿ ಸಮರ್ಥಿಸಿ ಮಾತನಾಡಿದ್ದಾರೆ. ವಿಧಾನಪರಿಷತ್ ಚುನಾವಣೆ ಹಿನ್ನೆಲೆಯಲ್ಲಿ ಮತದಾನದ ಬಗ್ಗೆ ಶಾಸಕರಿಗೆ ಮಾಹಿತಿ ನೀಡಲಾಗುವುದು. ಮತದಾನ ಹೇಗೆ ಮಾಡಬೇಕು ಎಂಬುದರ ಬಗ್ಗೆ ತರಬೇತಿ ನೀಡಲಾಗುವುದು. ಇದು ಮಹತ್ವದ ಚುನಾವಣೆಯಾಗಿರುವುದರಿಂದ ಎರಡು ಮೂರು ಮತ ಹೆಚ್ಚುಕಮ್ಮಿಯಾದರೂ ಫಲಿತಾಂಶ ಏರುಪೇರಾಗುತ್ತದೆ. ಹಾಗಾಗಿ ಶಾಸಕರಿಗೆ ಇದರ ಬಗ್ಗೆ ಸೂಕ್ತ ಮಾಹಿತಿ ನೀಡಲಾಗುವುದು ಎಂದು ಹೇಳಿದ್ದಾರೆ. ಈಹಿನ್ನೆಲೆಯಲ್ಲಿ ಪಕ್ಷದ ಶಾಸಕರ ಸಭೆ ಕರೆಯಲಾಗಿದೆ. ಸಭೆಯಲ್ಲಿ ಮತದಾನ ಮಾಡುವುದು ಹೇಗೆ ಎಂಬುದರ ಬಗ್ಗೆ ತಿಳುವಳಿಕೆ ನೀಡಲಾಗುವುದು ಎಂದು ತಿಳಿಸಿದ್ದಾರೆ.ಈಗಾಗಲೇ ವಿಧಾನಪರಿಷತ್ನ ಏಳು ಸ್ಥಾನಗಳಿಗೆ ಎನ್ಡಿಎ ಹಾಗೂ ಕಾಂಗ್ರೆಸ್ ನಡುವೆ ಪೈಪೋಟಿ ನಡೆದಿದ್ದು, 8ನೇ ಅಭ್ಯರ್ಥಿ ಗೆಲುವಿಗಾಗಿ ಜೆಡಿಎಸ್ ಬಿಜೆಪಿ ಕಾಂಗ್ರೆಸ್ನಿಂದ ನಾನಾ ತಂತ್ರಗಾರಿಕೆ ನಡೆಯುತ್ತಿದೆ. ಬಿಜೆಪಿಯಿಂದ ಇಬ್ಬರು ಅಭ್ಯರ್ಥಿಗಳು ಜೆಡಿಎಸ್ನ ಓರ್ವ ಅಭ್ಯರ್ಥಿ ಕಾಂಗ್ರೆಸ್ನಿAದ 5 ಮಂದಿ ಚುನಾವಣಾ ಕಣದಲ್ಲಿದ್ದಾರೆ. ಜೆಡಿಎಸ್ನ ಅಭ್ಯರ್ಥಿಯನ್ನು ಗೆಲ್ಲಿಸಿಕೊಳ್ಳಲು ಬಿಜೆಪಿಯ ಇಬ್ಬರು ಅಭ್ಯರ್ಥಿಯನ್ನು ಹೊರತು ಪಡಿಸಿ ಹೆಚ್ಚುವರಿ ಮತಗಳನ್ನು ಜೆಡಿಎಸ್ ಬಳಿಯಿದೆ. ಉಳಿದಂತೆ ಕೊರತೆಯಾಗುವ ನಾಲ್ಕೈದು ಮತಗಳಿಗಾಗಿ ಜೆಡಿಎಸ್ ಕಾಂಗ್ರೆಸ್ ಮತಗಳನ್ನು ಪಡೆಯಲು ತೆರೆಮರೆಯಲ್ಲಿ ಕಾರ್ಯತಂತ್ರ ರೂಪಿಸತೊಡಗಿದೆ. ಒಟ್ಟಾರೆ ಪರಿಷತ್ ಚುನಾವಣೆಯಲ್ಲಿ ತನ್ನ ಅಭ್ಯರ್ಥಿಗಳನ್ನು ಗೆಲ್ಲಿಸಿಕೊಳ್ಳಲು ಎನ್ಡಿಎ ಹಾಗೂ ಕಾಂಗ್ರೆಸ್ ನಡುವೆ ತೀವ್ರ ಪೈಪೋಟಿ ನಡೆದಿದೆ.



