ಬೆಂಗಳೂರು: ಹಾಸನ ಸಂಸದ ಪ್ರಜ್ವಲ್ ರೇವಣ್ಣ, ಜರ್ಮನಿಯಿಂದ ಲಂಡನ್ಗೆ ರೈಲಿನಲ್ಲಿ ಪ್ರಯಾಣ ಬೆಳೆಸಿದ್ದಾರೆ ಎಂಬ ಮಾಹಿತಿ ಹೊರಬಿದ್ದಿದೆ.ವಿಮಾನದ ಮೂಲಕ ಪ್ರಯಾಣ ಬೆಳೆಸಿದ್ದೇ ಆದರೆ ಅದು ಎಲ್ಲರಿಗೂ ಗೊತ್ತಾಗುತ್ತದೆ. ಹೀಗಾಗಿ, ವಿಮಾನ ಬಿಟ್ಟು, ರೈಲಿನಲ್ಲಿ ಪ್ರಯಾಣ ಬೆಳೆಸಿದ್ದಾರೆ ಎಂಬ ಮಾಹಿತಿ ಎಸ್ಐಟಿ ಅಧಿಕಾರಿಗಳ ಗಮನಕ್ಕೆ ಬಂದಿದೆ ಎಂದು ಹೇಳಲಾಗಿದೆ.
ಎಸ್ಐಟಿ ಅಧಿಕಾರಿಗಳು ಪ್ರಜ್ವಲ್ ರೇವಣ್ಣರ ಮೇಲೆ ತೀವ್ರ ನಿಗಾ ಇರಿಸಿದ್ದು, ಚಲನವಲನಗಳ ಬಗ್ಗೆ ಮಾಹಿತಿ ಸಂಗ್ರಹ ಮಾಡುತ್ತಿದ್ದಾರೆ ಎನ್ನಲಾಗಿದ್ದು, ಪ್ರಜ್ವಲ್ ಅವರು ಜರ್ಮನಿಯ ಮ್ಯೂನಿಚ್ನಿಂದ ತನ್ನ ಇಬ್ಬರು ಸ್ನೇಹಿತರೊಂದಿಗೆ ಇಂಗ್ಲೆಂಡ್ನ ಲಂಡನ್ಗೆ ಪ್ರಯಾಣ ಬೆಳೆಸಿದ್ದಾರೆ ಎಂದು ಹೇಳಲಾಗಿದೆ.
ದುಬೈನ ಓರ್ವ ಸ್ನೇಹಿತ ಸೇರಿದಂತೆ ಪ್ರಜ್ವಲ್ ಜತೆ ಇಬ್ಬರು ಸ್ನೇಹಿತರು ಸಹ ಇದ್ದಾರೆ ಎಂದು ಹೇಳಲಾಗಿದೆ.
ಪ್ರಜ್ವಲ್ ಇದುವರೆಗೂ ಪತ್ತೆಯಾಗದ ಕಾರಣ ಆತನನ್ನು ಆರ್ಥಿಕ ಸಂಕಷ್ಟಕ್ಕೆ ಸಿಲುಕಿಸಲು ಎಸ್ಐಟಿ ಮುಂದಾಗಿದೆ ಎನ್ನಲಾಗಿದೆ.ಈಗಾಗಲೇ ಬೆಂಗಳೂರಿನಿಂದ ಪ್ರಜ್ವಲ್ ಬ್ಯಾಂಕ್ ಖಾತೆಗೆ ಲಕ್ಷಾಂತರ ರೂ. ಹಣ ವರ್ಗಾವಣೆಯಾಗಿರುವುದನ್ನು ಎಸ್.ಐಟಿ ಅಧಿಕಾರಿಗಳು ಮಾಹಿತಿ ಕಲೆಹಾಕಿದ್ದಾರೆ. ಹಾಗಾಗಿ ಪ್ರಜ್ವಲ್ಗೆ ಹಣ ದೊರಕದಂತೆ ಮಾಡಲು ಆತನ ಬ್ಯಾಂಕ್ ಖಾತೆಗಳನ್ನು ಪ್ರೀಜ್ ಮಾಡಲು ಎಸ್ಐಟಿ ಮುಂದಾಗಿದೆ ಎನ್ನಲಾಗಿದೆ.ಈಗಾಗಲೇ ಪ್ರಜ್ವಲ್ ವಿರುದ್ಧ ದಾಖಲಾಗಿರುವ ಒಂದು ಪ್ರಕರಣದಲ್ಲಿ ದೋಷಾರೋಪಣ ಪಟ್ಟಿ ಸಲ್ಲಿಸಲು ಎಸ್ಐಟಿ ಚಿಂತನೆ ನಡೆಸಿದೆ ಎಂದು ಹೇಳಲಾಗಿದೆ.