ಮಳವಳ್ಳಿ: ಮಂಡ್ಯ ನಗರದ, ಎಂ.ಸಿ.ರಸ್ತೆ ಕಲ್ಲಹಳ್ಳಿ, ಸುಮ ರವಿ ಕಲ್ಯಾಣ ಮಂಟಪದಲ್ಲಿ ಶ್ರೀಆದಿಚುಂಚನಗಿರಿ ಮಹಾಸಂಸ್ಥಾನ ಮಠ ಹಾಗೂ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಮಂಡ್ಯ ಜಿಲ್ಲಾ ಘಟಕ ಇವರ ಸಹಯೋಗದಲ್ಲಿ ಮಂಡ್ಯ, ಮೈಸೂರು, ಚಾಮರಾಜನಗರ, ಕೊಡಗು, ಹಾಸನ, ತುಮಕೂರು ಹಾಗೂ ರಾಮನಗರ ಜಿಲ್ಲೆಗಳ ಕಾರ್ಯನಿರತ ಪತ್ರಕರ್ತರ ಅಂತರ ಜಿಲ್ಲಾ ಸಮ್ಮೇಳನ ಉದ್ಘಾಟನಾ ಸಮಾರಂಭದಲ್ಲಿ ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷ ಡಾ.ನಿರ್ಮಲಾನಂದನಾಥ ಮಹಾ ಸ್ವಾಮೀಜಿಗಳವರು ದಿವ್ಯ ಸಾನಿಧ್ಯ ವಹಿಸಿ ಆಶೀರ್ವಚನ ನೀಡಿದರು.
ಕಾರ್ಯಕ್ರಮವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯರವರು ಉದ್ಘಾಟಿಸಿದರು.ಈ ಸಂದರ್ಭದಲ್ಲಿ ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಶಾಸಕರಾದ ಪಿಎಂ ನರೇಂದ್ರಸ್ವಾಮಿ ರಮೇಶ್ ಬಂದಿ ಸಿದ್ದೇಗೌಡ KUWJ ಸಂಘದ ರಾಜ್ಯಾಧ್ಯಕ್ಷರಾದ ಶಿವಾನಂದ ತಗಡೂರು, KUWJ ನ ಮಂಡ್ಯ ಜಿಲ್ಲಾಧ್ಯಕ್ಷರು ಕೆ.ಸಿ.ಮಂಜುನಾಥ್, ಮತ್ತೀಕೆರೆ ಜಯರಾಮ್, ಕಾರ್ಯದರ್ಶಿ ಹಾಗೂ ಮಂಡ್ಯ ಉಸ್ತುವಾರಿ, KUWJ ಸೋಮಶೇಖರ್ ಕೆರಗೋಡು, ಕಾರ್ಯದರ್ಶಿ, KUWJ ಕೆ.ಎನ್.ನವೀನಕುಮಾರ್, ಪ್ರಧಾನ ಕಾರ್ಯದರ್ಶಿ, ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ, ಮಂಡ್ಯ ಹಾಗೂ ಪದಾಧಿಕಾರಿಗಳು, ಸದಸ್ಯರು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದವರು ಪಾಲ್ಗೊಂಡಿದ್ದರು. ಶಾಲಾ ಮಕ್ಕಳು ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನೆರವೇರಿಸಿದರು.