ಟೆಹ್ರಾನ್: ಅಮೆರಿಕದ ನೆಲೆಗಳು ಮತ್ತು ಮಧ್ಯಪ್ರಾಚ್ಯ ದೇಶಗಳ ಮೇಲೆ ನಡೆಯುತ್ತಿರುವ ದಾಳಿ ಕೊನೆಯಾಗಬೇಕಾದರೆ ನಮ್ಮ ಮೂರು ಷರತ್ತನ್ನುಗಳನ್ನು ಒಪ್ಪಿಕೊಳ್ಳಬೇಕೆಂದು ಇರಾನ್ ಹೇಳಿದೆ
ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು, ಇರಾನ್ನ ಕಾನೂನುಬದ್ಧ ಹಕ್ಕುಗಳನ್ನು ಗುರುತಿಸಬೇಕು. ಸಂಘರ್ಷದ ಸಮಯದಲ್ಲಿ ಉಂಟಾದ ಹಾನಿಗಳಿಗೆ ಪರಿಹಾರ ನೀಡಬೇಕು. ಭವಿಷ್ಯದಲ್ಲಿ ಆಕ್ರಮಣ ಮಾಡುವುದಿಲ್ಲ ಎಂದು ದೃಢವಾದ ಅಂತರಾಷ್ಟ್ರೀಯ ಖಾತರಿಗಳನ್ನು ನೀಡಬೇಕು ಎಂದು ಎಕ್ಸ್ನಲ್ಲಿ ಪೋಸ್ಟ್ ಮಾಡಿದ್ದಾರೆ.
ರಷ್ಯಾ ಮತ್ತು ಪಾಕಿಸ್ತಾನದ ನಾಯಕರ ಜೊತೆ ಮಾತನಾಡುವ ವೇಳೆ ನಾನು ಈ ವಿಚಾರಗಳ ಬಗ್ಗೆ ಮಾತನಾಡಿದ್ದೇನೆ.
ಈ ಪ್ರದೇಶದಲ್ಲಿ ಶಾಂತಿಗೆ ಇರಾನ್ನ ಬದ್ಧತೆಯನ್ನು ನಾನು ಪುನರುಚ್ಚರಿಸಿದ್ದೇನೆ. ಜಿಯೋನಿಸ್ಟ್ ಆಡಳಿತ ಮತ್ತು ಅಮೆರಿಕ ಹೊತ್ತಿಸಿದ ಈ ಯುದ್ಧವನ್ನು ಕೊನೆಗೊಳಿಸಲು ಇರುವ ಏಕೈಕ ಮಾರ್ಗ ಇದು ಎಂದು ಬರೆದಿದ್ದಾರೆ.
ಯುದ್ಧ ಕೊನೆಗೊಳ್ಳಲು 3 ಷರತ್ತು ವಿಧಿಸಿದ ಇರಾನ್



