ಬೆಂಗಳೂರು: ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಬೆಂಗಳೂರು ನಗರದ ಚಿನ್ನದ ವ್ಯಾಪಾರಿಗಳಿಗೆ ಬೆಳಗ್ಗೆ ಶಾಕ್ ನೀಡಿದ್ದಾರೆ. ನಗರದಲ್ಲಿನ ಚಿನ್ನದ ಅಂಗಡಿಗಳ ಮೇಲೆ ಐಟಿ ದಾಳಿ ನಡೆದಿದೆ.
ಇಂದು ಬೆಳಗ್ಗೆ ನಗರದ 25ಕ್ಕೂ ಹೆಚ್ಚು ಚಿನ್ನದ ಅಂಗಡಿಗಳ ಮೇಲೆ ಐಟಿ ದಾಳಿ ನಡೆದಿದೆ. ಅಧಿಕಾರಿಗಳು ದಾಖಲೆಗಳ ಪರಿಶೀಲನೆಯನ್ನು ನಡೆಸುತ್ತಿದ್ದಾರೆ. ಜಯನಗರ, ಬಸವನಗುಡಿ, ಚಿಕ್ಕಪೇಟೆ, ಯಶವಂತರಪುರ ಸೇರಿದಂತೆ ನಗರದ ವಿವಿಧ ಪ್ರದೇಶಗಳಲ್ಲಿ ಚಿನ್ನದ ಅಂಗಡಿಗಳ ಮೇಲೆ ಐಟಿ ಅಧಿಕಾರಿಗಳು ದಾಳಿ ಮಾಡಿ, ದಾಖಲೆಗಳನ್ನು ಸಂಗ್ರಹ ಮಾಡುತ್ತಿದ್ದಾರೆ.
ತೆರಿಗೆ ವಂಚನೆ ಮಾಡಿ ಚಿನ್ನದ ವ್ಯಾಪಾರ ಮಾಡುತ್ತಿದ್ದ ದೂರುಗಳ ಹಿನ್ನಲೆಯಲ್ಲಿ ದಾಳಿ ಮಾಡಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಒಟ್ಟು 300ಕ್ಕೂ ಹೆಚ್ಚು ಅಧಿಕಾರಿಗಳ ತಂಡ ವಿವಿಧ ಪ್ರದೇಶದಲ್ಲಿ ನಡೆದಿರುವ ದಾಳಿಯಲ್ಲಿ ಪಾಳ್ಗೊಂಡಿದೆ. ಚಿನ್ನದ ವ್ಯಾಪಾರ, ತೆರಿಗೆ ಕಟ್ಟಿರುವ ರಶೀದಿ ಸೇರಿದಂತೆ ಇತರ ದಾಖಲೆಗಳನ್ನು ಪರಿಶೀಲಿಸುತ್ತಿದೆ.
Leave a Review