ಬೆಂಗಳೂರು: ಪ್ರತಿಷ್ಠಿತ ಶಿಕ್ಷಣ ಸಂಸ್ಥೆ ಮೇಲೆ ಆದಾಯ ತೆರಿಗೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಅಂತಾರಾಷ್ಟಿçಯ ಶಿಕ್ಷಣ ಸಂಸ್ಥೆ ಎಂದು ಹೇಳಲಾಗಿರುವ ಜೀವನಭೀಮಾನಗರ ಸಮೀಪವಿರುವ ಸಂಸ್ಥೆ ಮೇಲೆ ದಾಳಿ ನಡೆದಿದೆ ಎನ್ನಲಾಗಿದೆ.
ಸಂಸ್ಥೆಯ ಆಡಳಿತಾಧಿಕಾರಿಗಳ ನಿವಾಸದ ಮೇಲೆ ದಾಳಿ ನಡೆದಿದ್ದು, ದಾಖಲೆ ಪತ್ರ ಪರಿಶೀಲನೆ ನಡೆಸಲಾಗುತ್ತಿದೆ.
ಅಪಾರ ಮೊತ್ತದ ತೆರಿಗೆ ವಂಚನೆ ಆರೋಪದ ಮೇಲೆ ಈ ದಾಳಿ ನಡೆದಿದೆ ಎಂದು ತಿಳಿದುಬಂದಿದೆ.



