ಬೆಂಗಳೂರು: ಈಗಾಗಲೇ ಚಿನ್ನಾಬೆಳ್ಳಿ, ರಿಯಲ್ ಎಸ್ಟೇಟ್ ಮತ್ತಿತರ ಉದ್ಯಮಿಗಳಿಗೆ ಬಿಸಿ ಮುಟ್ಟಿಸಿರುವ ಆದಾಯ ತೆರಿಗೆ ಇಲಾಖಾ ಅಧಿಕಾರಿಗಳು ಇದೀಗ ಡ್ರೈಫ್ರೂಟ್ಸ್ ಅಂಗಡಿ ಮಾಲೀಕರ ಮೇಲೆ ದಾಳಿ ನಡೆಸಿ ದಾಖಲೆಪತ್ರ ಪರಿಶೀಲನೆ ನಡೆಸಿದ್ದಾರೆ.
ಇಂದು ಬೆಂಗಳೂರಿನ ರಾಜಾಜಿನಗರ ಬಿವಿಕೆ ಅಯ್ಯಂಗಾರ್ ರಸ್ತೆ ಸೇರಿದಂತೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದು, ಹಲವಡೆ ದಾಖಲೆಪತ್ರ ಪರಿಶೀಲನೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ.
ಅಪಾರ ಮೊತ್ತದ ತೆರಿಗೆ ವಂಚನೆ ಮಾಡುತ್ತಿದ್ದಾರೆ ಎಂಬ ಆರೋಪದ ಮೇಲೆ ಈ ದಾಳಿ ನಡೆದಿದೆ ಎಂದು ಹೇಳಲಾಗಿದೆ.