ಬೆಂಗಳೂರು: ಕಾಂಗ್ರೆಸ್ ಮುಖಂಡ ಹಾಗೂ ವಿಧಾನಪರಿಷತ್ ಮಾಜಿ ಸದಸ್ಯ ಎಂ.ಸಿ ವೇಣುಗೋಪಾಲ್ ಅವರ ಜೆಪಿ ನಗರದಲ್ಲಿನ ಮನೆ ಮೇಲೆ ದಿಢೀರ್ ಆದಾಯ ತೆರಿಗೆ ಇಲಾಖೆ(ಐಟಿ) ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಜೆ.ಪಿನಗರದಲ್ಲಿರುವ ವೇಣುಗೋಪಾಲ್ ಅವರ ಮನೆ ಮೇಲೆ 15ಮಂದಿ ಅಧಿಕಾರಿಗಳನ್ನೊಳಗೊಂಡ ಐಟಿ ಅಧಿಕಾರಿಗಳ ತಂಡ ದಾಳಿ ನಡೆಸಿ ದಾಖಲೆ ಪತ್ರಗಳ ಪರಿಶೀಲನೆ ಕೈಗೊಂಡಿದೆ. ಐಟಿ ಇಲಾಖೆಯ ಅಧಿಕಾರಿಗಳ ತಂಡವು 3 ಇನ್ನೋವಾ ಕಾರಿನಲ್ಲಿ ಆಗಮಿಸಿ ಬೆಳಗ್ಗೆ 6 ಗಂಟೆಯಿಂದಲೇ ದಾಳಿ ನಡೆಸಿ, ವಿವಿಧ ದಾಖಲೆ ಪತ್ರಗಳ ಪರಿಶೀಲನೆ ನಡೆಸಿದ್ದಾರೆ.
ಬೆಳಗ್ಗೆಯಿಂದ ಸ್ವಲ್ಪವೂ ಬಿಡುವು ಮಾಡಿಕೊಳ್ಳದ ಅಧಿಕಾರಿಗಳು, ಅಲ್ಲಿಗೇ ತಿಂಡಿ ತರಿಸಿಕೊಂಡು ಕೆಲಸ ಮುಂದುವರಿಸಿದ್ದಾರೆ. ವಿವಿಧ ದಾಖಲೆ ಪತ್ರಗಳನ್ನ ಪರಿಶೀಲನೆ ನಡೆಸಿದ್ದಾರೆ. ದಾಳಿ ವೇಳೆ ಮನೆಯಲ್ಲೇ ಇದ್ದ ವೇಣುಗೋಪಾಲ್ ಅಧಿಕಾರಿಗಳಿಗೆ ಸಹಕರಿಸಿದ್ದಾರೆ.