ಬೆಳಗಾವಿ: ಮಾಧ್ಯಮಗಳಲ್ಲಿ ಪಾಕ್ ಪರ ಘೋಷಣೆ ಸ್ಪಷ್ಟವಾಗಿತ್ತು. ಆ ಸಂದರ್ಭದಲ್ಲಿ ಸಚಿವರು ದೇಶ ದ್ರೋಹಿಗಳ ರಕ್ಷಣೆಗೆ ನಿಂತಿದ್ದರು. ಜವಾಬ್ದಾರಿ ಮರೆತು ಕೆಲ ಸಚಿವರು ದೇಶದ್ರೋಹಿಗಳ ಪರ ನಿಂತಿದ್ದು ದುರ್ದೈವ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಪಾಕ್ ಪರ ಘೋಷಣೆ ಸಂಬಂಧ ಮೂವರ ಬಂಧನ ವಿಚಾರ ಬೆಳಗಾವಿಯಲ್ಲಿ ಪ್ರತಿಕ್ರಿಯಿಸಿದ ಅವರು, ಇವರ ನಡೆ ಆತಂಕಕ್ಕೆ ಕಾರಣವಾಗಿದೆ. ಎಫ್ಎಸ್ಎಲ್ ರಿಪೋರ್ಟ್ ಬಂದು ನಾಲ್ಕು ದಿನ ಕಳೆದಿದೆ. ಎರಡು ದಿನಗಳ ಹಿಂದೆ NIA ಎಫ್ಐಆರ್ ಮಾಡಿಕೊಂಡಿದಕ್ಕೆ ಮೂವರ ಬಂಧನವಾಗಿದೆ.
ಮಾಧ್ಯಮಗಳೇ ಇದನ್ನು ಪ್ರಚೋದಿಸುತ್ತಿವೆ ಎಂದು ಸರ್ಕಾರ ದೂರಿತು. ಪತ್ರಕರ್ತರನ್ನು ಗುರಿ ಮಾಡಿ ಕೊಂಡು ಮಾತನಾಡಿದರು. ಪಾಕ್ ಪರ ಘೋಷಣೆ ಕೂಗಿದವರ ಸಮರ್ಥನೆ ಮಾಡಿಕೊಂಡವರು ಕ್ಷಮೆ ಕೇಳಬೇಕು ಎಂದು ಒತ್ತಾಯಿಸಿದ್ದಾರೆ.ಅಮ್ಮಾಜೇಶ್ವರಿ ಏತನೀರಾವರಿ ಯೋಜನೆಗೆ ಎರಡನೇ ಬಾರಿಗೆ ಶಂಕುಸ್ಥಾಪನೆ ಹಾಗೂ ಅಥಣಿಯಲ್ಲು ಯೋಜನೆಗೆ ಸಿಎಂ ಸಿದ್ದರಾಮಯ್ಯ ಚಾಲನೆ ಸಂಬಂಧ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯ ನಡೆಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಸರ್ಕಾರ ಬಂದು 9 ತಿಂಗಳು ಕಳೆದರೂ ಯಾವುದೇ ಹೊಸ ಯೋಜನೆ ರೂಪಿಸಿಲ್ಲ. ನಿರ್ಲಕ್ಷ್ಯ ಮಾಡಿದೆ ಹಳೆಯ ಯೋಜನೆ ಮತ್ತೆ ಚಾಲನೆ ನೀಡುತ್ತಿದ್ದಾರೆ. ಅಧಿಕಾರಿಗಳು ಮಿಸ್ ಗೈಡ್ ಮಾಡುತ್ತಿದ್ದು ಸಿಎಂ ಇದನ್ನು ಪರಿಶೀಲನೆ ಕ್ರಮ ವಹಿಸಬೇಕು ಎಂದು ಆಗ್ರಹಿಸಿದ್ದಾರೆ.
ಬೆಳಗಾವಿಗೆ ಇಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ಆಗಮಿಸುತ್ತಿದ್ದಾರೆ.
ಬೆಳಗಾವಿಯಲ್ಲೇ ಬಿಜೆಪಿ- ಜೆಡಿಎಸ್ ಮೈತ್ರಿಯ ಸಿಟು ಹಂಚಿಕೆ ಬಗ್ಗೆ ಚರ್ಚೆ ಆಗುತ್ತಾ ಎಂಬ ಮಾಧ್ಯಮ ಪ್ರಶ್ನೆಗೆ ಉತ್ತರಿಸಿದ ಅವರು, ಈ ಬಗ್ಗೆ ಯಾವುದೇ ಚರ್ಚೆ ಆಗಲ್ಲ, ದೆಹಲಿಯಲ್ಲಿ ಆಗಲಿದೆ ಎಂದು ಅವರು ತಿಳಿಸಿದ್ದಾರೆ.