ಬೆಂಗಳೂರು: ನೆಲದ ಭಾಷೆಯ ಶ್ರೀಮಂತಿಕೆ ಮತ್ತು ಅದರ ಸಾಂಸ್ಕೃತಿಕ ಮೌಲ್ಯವನ್ನು ಅರ್ಥಸಿಕೊಳ್ಳಲು ಸಮಾಜ ವಿಫಲವಾಗುತ್ತಿರುವುದು ಇಂದಿನ ದಿನಮಾನದ ಅತ್ಯಂತ ವಿಷಾದನೀಯ ಬೆಳವಣಿಗೆಯಾಗಿದೆ ಎಂದು ಮಾಜಿ ಸಚಿವ ಸುರೇಶ್ ಕುಮಾರ್ ಅಭಿಪ್ರಾಯಪಟ್ಟರು.ಬೆಂಗಳೂರಿನ ಶೇಷಾದ್ರಿಪುರ ಕಾಲೇಜಿನಲ್ಲಿ ಕನ್ನಡ ಗೆಳೆಯರ ಬಳಗ ಮತ್ತು ಕರ್ನಾಟಕ ಕಾರ್ಮಿಕಲೋಕಗಳವತಿಯಿಂದ ಆಯೋಜಿಸಿದ್ದ ಎಸ್ಎಸ್ಎಲ್ಸಿ ಕನ್ನಡ ಮಾಧ್ಯಮದಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ `ಸನ್ಮಾನ-ಬಹುಮಾನ’ ಹಾಗೂ ವಿದ್ಯಾನಿಧಿ ಆರ್ಥಿಕ ನೆರವು ವಿತರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಕರ್ನಾಟಕದಲ್ಲಿ ಕನ್ನಡಕ್ಕೆ ಸಿಗಬೇಕಾದ ಪ್ರಾಮುಖ್ಯತೆ ದಿನದಿಂದ ದಿನಕ್ಕೆ ಕುಸಿಯುತ್ತಿರುವುದು ಭವಿಷ್ಯದ ದೃಷ್ಟಿಯಿಂದ ಆತಂಕಕಾರಿ ಬೆಳವಣಿಗೆಯಾಗಿದೆ ಎಂದರು.ಕ್ಷಣ ಕ್ಷಣದ ಕಲಿಕೆ ಗ್ರಹಿಕೆಯೇ ಶಿಕ್ಷಣ: ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಶೇಷಾದ್ರಿಪುರಂ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿನಾಡೋಜ ಡಾ. ವೂಡೇ ಪಿ. ಕೃಷ್ಣ ಮಾತನಾಡಿ, ಓದಿ ಉತ್ತಮ ಅಂಕಗಳಿಸಿದ್ದಕ್ಕೆ ಇಂದು ಸನ್ಮಾನಿಸಿದ್ದಾರೆ. ನೀವು ಮುಂದಿನ ಕನ್ನಡ ಹಿರಿಮೆಯನ್ನು ಹೆಚ್ಚಿಸಲು ಶ್ರಮಿಸಲು ಇಂದಿನ ಈ ಕಾರ್ಯಕ್ರಮ ಸ್ಫೂರ್ತಿ ಆಗಲಿ ಎಂದರು.ಪ್ರಾಸ್ತಾವಿಕ ನುಡಿಗಳನ್ನಾಡಿದ ಕನ್ನಡ ಗೆಳೆಯರ ಬಳಗದ ಸಂಚಾಲಕ ರಾ.ನಂ. ಚಂದ್ರಶೇಖರ ಸರ್ಕಾರ ಕನ್ನಡ ಮಾಧ್ಯಮ ಶಾಲೆ ಉಳಿಸುವ ಇಚ್ಛಾಶಕ್ತಿ ಪ್ರದರ್ಶಶಿಸ ಬೇಕೆಂದರು.
ಕಾರ್ಯಕ್ರಮದಲ್ಲಿ, ರಾಜ್ಯಪಾಲರ ವಿಶೇಷ ಕಾರ್ಯದರ್ಶಿ ಪ್ರಭುಶಂಕರ್, ಕರ್ನಾಟಕ ವಿಕಾಸ ರಂಗದ ಅಧ್ಯಕ್ಷ ವ.ಚ. ಚನ್ನೇಗೌಡ ಅವರುಗಳು ಮಾತನಾಡಿದರು.
ಕನ್ನಡದ ಶ್ರೀಮಂತಿಕೆ ಮರೆಯುವುದು ವಿಷಾದನೀಯ: ಸುರೇಶ್ ಕುಮಾರ್



