ಗೌರಿಬಿದನೂರು: ಮಕ್ಕಳನ್ನು ಉತ್ತಮ ಪ್ರಜೆಗಳನ್ನಾಗಿ ಬೆಳಸುವುದು ಪೋಷಕರ ಜವಾಬ್ದಾರಿಯಾಗಿದೆ. ಮಕ್ಕಳ ಹಕ್ಕುಗಳ ರಕ್ಷಣೆಗೆ ನ್ಯಾಯಾಂಗ ಸದಾ ಬದ್ದವಾಗಿದೆ ಎಂದು ಗೌರವಾನ್ವಿತ ಪ್ರಧಾನ ಸಿವಿಲ್ ನ್ಯಾಯಾಧೀಶ ಗಣೇಶ್ ಎನ್ ಹೇಳಿದರು. ಮಕ್ಕಳ ದಿನಾಚರಣೆ ಪ್ರಯುಕ್ತ ನಗರದ ವಿವೇಕಾನಂದ ಶಾಲೆಯಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ನಮ್ಮ ದೇಶದ ಮೊದಲ ಪ್ರಧಾನಿ ನೆಹರು ಹುಟ್ಟಿದ ದಿನವನ್ನು ಮಕ್ಕಳ ದಿನಾಚರಣೆಯನ್ನಾಗಿ ಆಚರಿಸುತ್ತಾ ಬಂದಿದ್ದೇವೆ, ಪೋಷಕರು ಮಕ್ಕಳಿಗೆ ಮೌಲ್ಯಯುತವಾದ ಶಿಕ್ಷಣವನ್ನು ನೀಡಬೇಕು, ಶಿಕ್ಷಣ ಪಡೆಯುವ ಹಕ್ಕು ಎಲ್ಲಾ ಮಕ್ಕಳಿಗಿದೆ, ಇದನ್ನು ಸಂವಿಧಾನದಲ್ಲಿ ಸಹ ತಿಳಿಸಲಾಗಿದೆ ಎಂದು ತಿಳಿಸಿದರು.
ಇದೇ ಸಂದರ್ಭದಲ್ಲಿ ಸರ್ಕಾರಿ ಅಭಿಯೋಜಕ ಫಯಾಜ್ ಪಟೇಲ್, ದಾಳಪ್ಪ, ಮೂಕಾಂಬಿಕ, ಶಾಲೆಯ ಕಾರ್ಯದರ್ಶಿ ನಂಜೇಗೌಡ, ಯಶೋದಮ್ಮ, ಗೋಪಾಲ್, ನರಸಿಂಹಮೂರ್ತಿ, ನಾಗರಾಜು, ವರದರಾಜುಲು ಮುಂತಾದವರು ಹಾಜರಿದ್ದರು.



