ಬೆಂಗಳೂರು: ದಾವಣಗೆರೆ ದಕ್ಷಿಣ ಕ್ಷೇತ್ರದ ಟಿಕೆಟ್ಗಾಗಿ 7 ಮುಸ್ಲಿಂ ನಾಯಕರ ಹೆಸರು ಕೊಟ್ಟಿದ್ದೆ, ಗೆಲ್ಲಿಸಿಕೊಂಡು ಬರದಿದ್ರೆ ಸಚಿವ ಸ್ಥಾನಕ್ಕೆ ರಾಜೀನಾಮೆ ಕೊಡುತ್ತೇನೆ ಎಂದು ಕೆಪಿಸಿಸಿ ಸಭೆಯಲ್ಲಿ ಡಿಕೆ ಶಿವಕುಮಾರ್, ಸುರ್ಜೇವಾಲಾ ಅವರ ಎದುರಲ್ಲೇ ಓಪನ್ ಆಗಿ ಹೇಳಿದ್ದೆ ಎಂದು ಸಚಿವ ಜಮೀರ್ ಅಹ್ಮದ್ ತಿಳಿಸಿದರು.
ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ದಾವಣಗೆರೆ ಟಿಕೆಟ್ ಕೊಡದಿದ್ದಕ್ಕೆ ಅಸಮಾಧಾನ ಇದ್ದದ್ದು ನಿಜ, ಆ ನಂತರ ಎಲ್ಲವೂ ಸರಿಹೋಗಿದೆ. ಜಬ್ಬಾರ್ ಜೊತೆಗೆ 7 ಮುಸ್ಲಿಂ ನಾಯಕರ ಹೆಸರು ಕೊಟ್ಟಿದ್ದೆ, ಆದ್ರೆ ಜಬ್ಬಾರ್ಗೆ ಟಿಕೆಟ್ ಕೊಡಿ ಅಂತ ಕೇಳಲಿಲ್ಲ. ಯಾವುದೇ ಮುಚ್ಚುಮರೆ ಮಾಡಿಲ್ಲ. ಓಪನ್ ಆಗಿ ಕೆಪಿಸಿಸಿ ಸಭೆಯಲ್ಲೇ ಹೇಳಿದ್ದೆ ಎಂದು ಸ್ಪಷ್ಟಪಡಿಸಿದರು.
ಜಬ್ಬಾರ್ಗೆ ಟಿಕೆಟ್ ಕೊಡಿ ಅನ್ನಲಿಲ್ಲ, ಏಕೆಂದರೆ ಜಬ್ಬಾರ್ ಎಂಎಲ್ಸಿ ಇದ್ದಾರೆ, ಅವರಿಗೆ ಟಿಕೆಟ್ ಕೇಳಿದ್ದು ತಪುö್ಪ ಎಂದು ಗೊತ್ತಾಯ್ತು. ಜಬ್ಬಾರ್ ಬದಲು 7 ಮಂದಿ ಮುಸ್ಲೀಮರಲ್ಲಿ ಯಾರಿಗಾದರೂ ಟಿಕೆಟ್ ಕೊಡಿ ಅಂದಿದ್ದೆ. ನಾನು ಗೆಲ್ಲಿಸಿಕೊಂಡು ಬರದಿದ್ದರೆ, ಸಚಿವ ಸ್ಥಾನಕ್ಕೆ ರಾಜೀನಾಮೆ ಕೊಡುತ್ತೇನೆ ಅಂದಿದ್ದೆ. ಆದರೂ ಟಿಕೆಟ್ ಕೊಡಲಿಲ್ಲ. ಅದಕ್ಕೆ ಅಸಮಾಧಾನ ಇದ್ದಿದ್ದು ನಿಜ, ಆಮೇಲೆ ಎಲ್ಲವೂ ಸರಿ ಆಗಿದೆ ಎಂದರು. ಇನ್ನೂ ಅಲ್ಪಸಂಖ್ಯಾತ ಘಟಕ ಅಧ್ಯಕ್ಷ ಸ್ಥಾನಕ್ಕೆ ಅಬ್ದುಲ್ ಜಬ್ಬಾರ್ ರಾಜೀನಾಮೆ ವಿಚಾರಕ್ಕೆ ಪ್ರತಿಕ್ರಿಯಿಸಿ,
ಟಿಕೆಟ್ ನೀಡದಿದ್ದಕ್ಕೆ ಅಸಮಾಧಾನ ಇದ್ದದ್ದು ನಿಜ: ಜಮೀರ್



