ವೈಜಾಗ್ನ ಡಾ.ವೈಎಸ್ ರಾಜಶೇಖರ ರೆಡ್ಟಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಇಂಗ್ಲೆಂಡ್ ವಿರುದ್ಧದ ಎರಡನೇ ಟೆಸ್ಟ್ ಪಂದ್ಯದಲ್ಲಿ ಭಾರತ ಪುನಃ ಕಳಪೆ ಆರಂಭ ಪಡೆದುಕೊಂಡಿದೆ. ನಾಯಕ ರೋಹಿತ್ ಶರ್ಮಾ ಹಾಗೂ ಶುಭ್ಮನ್ ಗಿಲ್ ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿದೆ.
ಸದ್ಯ ಯಶಸ್ವಿ ಜೈಸ್ವಾಲ್ ಹಾಗೂ ಶ್ರೇಯಸ್ ಅಯ್ಯರ್ ಎಚ್ಚರಿಕೆಯಿಂದ ಬ್ಯಾಟ್ ಬೀಸುತ್ತಿದ್ದಾರೆ. ಭೋಜನ ವಿರಾಮದ ವೇಳೆಗೆ ಭಾರತ 31 ಓವರ್ಗಳಲ್ಲಿ 2 ವಿಕೆಟ್ ಕಳೆದುಕೊಂಡು 103 ರನ್ ಕಲೆಹಾಕಿದೆ. ಮೊದಲ ಸೆಷನ್ ಇಂಗ್ಲೆಂಡ್ ತಂಡದ ಪಾಲಾಗಿದೆ ಎನ್ನಬಹುದು.
ಈ ಪಂದ್ಯದಲ್ಲಿ ಟಾಸ್ ಗೆದ್ದ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡರು.
ಅದರಂತೆ ಓಪನರ್ಗಳಾಗಿ ಕಣಕ್ಕಿಳಿದ ಜೈಸ್ವಾಲ್ ಹಾಗೂ ರೋಹಿತ್ ಮೊದಲ ವಿಕೆಟ್ಗೆ 40 ರನ್ಗಳ ಜೊತೆಯಾಟ ಆಡಿದರು. ಚೆನ್ನಾಗಿಯೆ ಆಡುತ್ತಿದ್ದ ಹಿಟ್ಮ್ಯಾನ್ 14 ರನ್ ಗಳಿಸಿದ್ದಾಗ ಶೋಯೆಜ್ ಬಶಿರ್ ಬೌಲಿಂಗ್ನಲ್ಲಿ ಒಲ್ಲಿ ಪೋಪ್ಗೆ ಕ್ಯಾಚ್ ನೀಡಿ ನಿರ್ಗಮಿಸಿದರು. ಬಳಿಕ ಶುಭ್ಮನ್ ಗಿಲ್ ಜೊತೆಯಾದ ಜೈಸ್ವಾಲ್ ಎಚ್ಚರಿಕೆಯಿಂದ ಬ್ಯಾಟ್ ಬೀಸಿದರು.