ಬೆಂಗಳೂರು: ನಿನ್ನೆ ಬೆಂಗಳೂರಿನ ತಮ್ಮ ಪಾರಿಜಾತ ನಿವಾಸದ ಮೇಲೆ ಕಾಂಗ್ರೆಸ್ ಕಾರ್ಯಕರ್ತರು ಮುತ್ತಿಗೆ ಹಾಕಲು ಪ್ರಯತ್ನಿಸಿದ ಹಿನ್ನೆಲೆ ಬಿಜೆಪಿ ಮುಖಂಡ ಶಾಸಕ ಜನಾರ್ದನರೆಡ್ಡಿ ತೀವ್ರವಾಗಿ ಕಿಡಿಕಾರಿದ್ದಾರೆ.
ಇಂದು ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಡಿಕೆ.ಶಿವಕುಮಾರ್ ಅವರು ಹತಾಶರಾಗಿದ್ದಾರೆ ಎಂದು ದೂರಿದ್ದಾರೆ.
ಬಳ್ಳಾರಿಯಲ್ಲಿ ನಡೆದ ಫೈರಿಂಗ್ ಘಟನೆಯನ್ನು ಸಿಬಿಐ ತನಿಖೆಗೆ ಕೊಡಲಿ ಎಂದು ಪುನುರುಚ್ಚರಿಸಿದ ಅವರು ಮುಖ್ಯಮಂತ್ರಿಯವರ ವಿರುದ್ಧವೂ ಗುಡುಗಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಅಧಿಕಾರಿಯಾವಧಿಯಲ್ಲಿ ಬಹುತೇಕ ಪ್ರಕರಣಗಳನ್ನು ಸಿಬಿಐಗೆ ಕೊಟ್ಟಿದ್ದೇವೆ. ಬಿಜೆಪಿ ಎಷ್ಟು ಪ್ರಕರಣ ಕೊಟ್ಟಿದೆ ಎಂದು ಪ್ರಶ್ನಿಸುತ್ತಾರೆ. ಕಾಂಗ್ರೆಸ್ ಐದು ಗ್ಯಾರಂಟಿಗಳನ್ನು ನೀಡಿದೆ. ಇದೀಗ ಆರನೇ ಗ್ಯಾರಂಟಿ ಸಿದ್ದರಾಮಯ್ಯ ಮನೆಗೆ ಹೋಗುವುದು. ಮನೆಗೆ ಹೋಗುವುದಕ್ಕೂ ಮುಂಚೆ ಬಳ್ಳಾರಿ ಫೈರಿಂಗ್ ಘಟನೆಯನ್ನು ಸಿಬಿಐಗೆ ಕೊಡಲಿ ಎಂದು ಒತ್ತಾಯಿಸಿದ್ದಾರೆ.
ಫೈರಿಂಗ್ ಘಟನೆಯನ್ನು ವಿರೋಧಿಸಿ ರಾಜ್ಯಾದ್ಯಂತ ನಾವೆಲ್ಲಾ ಹಂತಹAತವಾಗಿ ಹೋರಾಟ ನಡೆಸುತ್ತೇವೆ ಎಂದಿದ್ದಾರೆ.
ಬಳ್ಳಾರಿಯಿಂದ ಬೆಂಗಳೂರು ಪಾದಯಾತ್ರೆ ಬಗ್ಗೆ ಪಕ್ಷದ ರಾಷ್ಟಿçÃಯ ವರಿಷ್ಠರು ನಿರ್ಧಾರಕೈಗೊಳ್ಳುತ್ತಾರೆ. ಈ ಸಂಬAಧ ಪಕ್ಷದ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ವರಿಷ್ಠರೊಂದಿಗೆ ಮಾತನಾಡಿ ಸೂಕ್ತ ನಿರ್ಧಾರ ಕೈಗೊಳ್ಳುತ್ತಾರೆ ಎಂದು ತಿಳಿಸಿದರು.
ಕಾಂಗ್ರೆಸ್ ವಿರುದ್ಧ ಜನಾರ್ದನರೆಡ್ಡಿ ಕಿಡಿ



