ನೆಲಮಂಗಲ ಗ್ರಾ: ರಾಜ್ಯದಲ್ಲಿ ಪ್ರಾದೇಶಿಕ ಪಕ್ಷವಾದ ಜೆಡಿಎಸ್ ಮಾಜಿ ಪ್ರಧಾನ ಮಂತ್ರಿ ಎಚ್.ಡಿ.ದೇವೇಗೌಡರು ಹಾಗೂ ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿರವರ ನೇತೃತ್ವದಲ್ಲಿ ಬಹುಮತ ಗಳಿಸುವುದರ ಮೂಲಕ ರಾಜ್ಯದಲ್ಲಿ ಅದಿಕಾರಕ್ಕೆ ಬರಲಿದೆ ಎಂದು ಶಾಸಕ ಡಾ.ಕೆ.ಶ್ರೀನಿವಾಸಮೂರ್ತಿ ವಿಶ್ವಾಸ ವ್ಯಕ್ತಪಡಿಸಿದರು.
ತಾಲೂಕಿನ ಸೋಂಪುರ ಹೋಬಳಿಯ ನರಸೀಪುರ ಗ್ರಾಮದಲ್ಲಿ ಜೆಡಿಎಸ್ ಮುಖಂಡರ ಸಭೆ ಹಾಗೂ ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು. ಕಳೆದ ಹತ್ತು ವರ್ಷಗಳಿಂದ ಕ್ಷೇತ್ರದ ಅಭಿವೃದ್ದಿಗಾಗಿ ಶ್ರಮಿಸಿದ್ದು ನೆಲಮಂಗಲ ಕ್ಷೇತ್ರವನ್ನು ಮಾದರಿ ಕ್ಷೇತ್ರವನ್ನಾಗಿ ರೂಪಿಸಿದ್ದೇನೆ. ಈ ಬಾರಿಯ ಚುನಾವಣೆಯಲ್ಲಿಯೂ ಸಹ ನನ್ನನ್ನು ಗೆಲ್ಲಿಸಿ ಶಾಸಕರನ್ನಾಗಿ ಮಾಡಿದರೆ ಕ್ಷೇತ್ರವನ್ನು ಇನ್ನಷ್ಟು ಅಭಿವೃದ್ದಿ ಮಾಡಲಾಗುವುದು ಎಂದರು.
ನಮ್ಮ ಕ್ಷೇತ್ರದ ಕಾರ್ಯಕರ್ತರು, ಕೆಲವು ಮುಖಂಡರುಗಳಲ್ಲಿ ಸಣ್ಣಪುಟ್ಟ ಅಸಮಾಧಾನಗಳಿದ್ದವು. ಈಗಾಗಲೇ ಸ್ಥಳೀಯ ಮುಖಂಡರ ಜೊತೆ ಅವರ ಮನೆಗಳಿಗೆ ಭೇಟಿ ನೀಡಿ ಅಸಮಾಧಾನ ಶಮನ ಮಾಡಿದ್ದು ಮತ್ತೆ ನನಗೆ ಆರ್ಶೀವದಿಸುವಂತೆ ಕೇಳಿದ್ದು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ ಎಂದರು.
ನೆಲಮಂಗಲ ಪಿಎಲ್‍ಡಿ ಬ್ಯಾಂಕ್ ಅಧ್ಯಕ್ಷ ಸಾದಿಕ್‍ಪಾಷಾ ಮಾತನಾಡಿ ನಮ್ಮ ಪಕ್ಷದಿಂದ ಯಾವ ಕಾರ್ಯಕರ್ತರೂ ಸಹ ಬೇರೆ ಪಕ್ಷಕ್ಕೆ ಹೋಗಿಲ್ಲ. ಮೂರನೇ ಬಾರಿಗೆ ನಮ್ಮ ಶಾಸಕರು ಹ್ಯಾಟ್ರಿಕ್ ಗೆಲುವು ಸಾದಿಸಲಿದ್ದಾರೆ ಎಂದರು.
ಬಿಡಿಸಿಸಿ ಬ್ಯಾಂಕ್ ಉಪಾಧ್ಯಕ್ಷ ಮಾಚನಹಳ್ಳಿ ಪಟ್ಟಾಭಿರಾಮಯ್ಯ (ಜಯಣ್ಣ) ನೆಲಮಂಗಲ ಪಿಎಲ್‍ಡಿ ಬ್ಯಾಂಕ್ ಅಧ್ಯಕ್ಷ ಸಾದಿಕ್ ಪಾಷಾ ಮಾತನಾಡಿ ನಮ್ಮ ಪಕ್ಷದ ಕಾರ್ಯವೈಖ್ಯರಿಗಳನ್ನು ಮೆಚ್ಚಿ ಸುಮಾರು 50 ಬೇರೆ ಪಕ್ಷದ ಕಾರ್ಯಕರ್ತರು ನಮ್ಮ ಪಕ್ಷಕ್ಕೆ ಸೇರ್ಪಡೆಗೊಂಡಿದ್ದು ಇನ್ನಷ್ಟು ಕಾರ್ಯಕರ್ತರು ಸೇರ್ಪಡೆಗೊಳ್ಳಲಿದ್ದಾರೆ ಎಂದರು. ಸೋಂಪುರ ಹೋಬಳಿ ಘಟಕದ ಅಧ್ಯಕ್ಷ
ಮೋಹನ್‍ಕುಮಾರ್, ತಾ.ಪಂ.ಮಾಜಿ ಅಧ್ಯಕ್ಷ ಪುಟ್ಟಗಂಗಯ್ಯ, ಮುಖಂಡರುಗಳಾದ ರಮೇಶ್, ರಂಗನಾಥ್, ಗೋವಿಂದರಾಜು, ಮೂರ್ತಿ ಮತ್ತೀತ್ತರಿದ್ದರು.
Leave a Review