ಬೆಂಗಳೂರು: ಕಳೆದ ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್ ಬಿಜೆಪಿ ಪಕ್ಷಗಳು ಮೈತ್ರಿ ಮಾಡಿಕೊಂಡು ಚುನಾವಣೆ ಎದುರಿಸಿದ ರೀತಿಯಲ್ಲೇ ಮುಂದಿನ ಚುನಾವಣೆಗಳಲ್ಲು ಮೈತ್ರಿ ಮುಂದುವರಿಸುವರೇ ಎಂಬ ಚರ್ಚೆ ಈಗ ರಾಜಕೀಯ ವಲಯದಲ್ಲಿ ನಡೆದಿದೆ.
ಈಗಾಗಲೇ ಮಂಡ್ಯ ಜಿಲ್ಲೆಯಲ್ಲಿ ಜೆಡಿಎಸ್ ಬಿಜೆಪಿ ಸ್ಥಳೀಯ ಸಂಸ್ಥತೆ ಚುನಾವಣೆಗಳಲ್ಲಿ ಪ್ರತ್ಯೇಕವಾಗಿ ಚುನಾವಣೆ ಎದುರಿಸುವ ಬಗ್ಗೆ ಹೇಳಿಕೆಗಳು ಕೇಳಿಬಂದಿದ್ದವು.
ಸ್ವತಃ ಜೆಡಿಎಸ್ ವರಿಷ್ಠದೇವೇಗೌಡ ಅವರೇ ಈ ಹೇಳಿಕೆ ನೀಡಿದ್ದಾರೆ ಎನ್ನಲ್ಲಾಗಿದೆ.
ಇದೀಗ ನಡೆಯುತ್ತಿರುವ ರಾಜಕೀಯ ಬೆಳವಣಿಗೆಗಳನ್ನು ಗಮನಿಸಿದರೆ ಎರಡು ಪಕ್ಷದ ಮೈತ್ರಿ ಮುಂದುವರಿಯುವುದೇ ಎಂಬ ಚರ್ಚೆ ಜೋರಾಗಿ ಕೇಳಿಬರುತ್ತಿದೆ.
ರಾಮನಗರದಲ್ಲಿ ನಿನ್ನೆ ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರ್ ಸ್ವಾಮಿ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು ರಾಜ್ಯ ರಾಜಕಾರಣಕ್ಕೆ ಬರುವುದು ಅನಿವಾರ್ಯ. ಅವರು ಈಗಾಗಲೇ ಮುಖ್ಯಮಂತ್ರಿಯಾಗಿ ಕೆಲಸ ಮಾಡಿದ್ದಾರೆ. ರಾಜ್ಯದ ಬಹುತೇಕ ಕಡೆ ಜನರು ಕುಮಾರಸ್ವಾಮಿ ಮತ್ತೆ ಮುಖ್ಯಮಂತ್ರಿಯಾಗುವುದನ್ನು ಇಚ್ಛೆಪಡುತ್ತಿದ್ದಾರೆ. ಹಾಗಾಗಿ ಕುಮಾರಸ್ವಾಮಿ ರಾಜ್ಯರಾಜಕಾರಣಕ್ಕೆ ಬರುವುದು ನೂರಕ್ಕೆ ನೂರು ಭಾಗ ಖಚಿತ ಎಂಬ ರೀತಿಯಲ್ಲಿ ಹೇಳಿಕೆ ನೀಡಿದ್ದಾರೆ.
ಕುಮಾರಸ್ವಾಮಿ ರಾಜ್ಯ ರಾಜಕಾರಣಕ್ಕೆ ಮರಳಿದ್ದೇ ಆಗಿದ್ದಲ್ಲಿ ಕೇಂದ್ರ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುವರೇ ಜೆಡಿಎಸ್ ಬಿಜೆಪಿ ಮೈತ್ರಿ ಮುಂದುವರಿಯುವುದೇ ಎಂಬ ಅನೇಕ ಪಕ್ಷಗಳು ಉದ್ಭವವಾಗುತ್ತಿವೆ.
ಕುಮಾರಸ್ವಾಮಿ ರಾಜ್ಯರಾಜಕಾರಣಕ್ಕೆ ಮರಳಿ ೨೦೨೮ರ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧೆ ಮಾಡಿದ್ದೆ ಆದಲ್ಲಿ ಮುಂದಿನ ಮುಖ್ಯಮಂತ್ರಿ ಯಾರು ಎಂಬ ಪ್ರಶ್ನೆಯೂ ಎದುರಾಗಲಿದೆ. ೨ಪಕ್ಷದ ಮೈತ್ರಿ ಮುಂದುವರಿದಲ್ಲಿ ಮುಂದಿನ ಮುಖ್ಯಮಂತ್ರಿ ಯಾರು ಎಂಬುದರ ಬಗ್ಗೆ ಜೆಡಿಎಸ್ ಬಿಜೆಪಿಯಲ್ಲಿ ಚರ್ಚೆಯಾಗಿ ನಿರ್ಧಾರಕ್ಕೆ ಬರಬೇಕಿದೆ.
ಸ್ಥಳೀಯ ಸಂಸ್ಥೆ ಚುನಾವಣೆಗಳಲ್ಲಿ ಸಹ ಮೈತ್ರಿ ಮುಂದುವರಿದರೆ ಸ್ಥಾನ ಹೊಂದಾಣಿಕೆ ಬಗ್ಗೆ ಕೆಲ ಕ್ಷೇತ್ರಗಳಲ್ಲಿ ಅಪಸ್ವರ ಕೇಳಿಬರುತ್ತಿದೆ.
ಹೀಗಾಗಿ ಮೈತ್ರಿ ಮುಂದುವರಿಯುತ್ತದೆ ಇಲ್ಲವೋ ಎಂಬುದರ ಬಗ್ಗೆ ಎರಡು ಪಕ್ಷಗಳ ಕಾರ್ಯಕರ್ತರು ಮುಖಂಡರಲ್ಲಿ ಜಿಜ್ಞಾಸೆ ಮೂಡಿಸಿದೆ.
ಜೆಡಿಎಸ್-ಬಿಜೆಪಿ ಮೈತ್ರಿ ಮುಂದುವರಿಯುವುದೇ…?



