ಬೆಂಗಳೂರು: ಕುರ್ಚಿ ಆಸೆಗಾಗಿ ಡಿಸಿಎಂ ಡಿಕೆ ಶಿವಕುಮಾರ್ ಅವರು ತಮ್ಮ ವಿರೋಧಿ ಬಣದ ನಾಯಕರನ್ನು ಹೊಂಚು ಹಾಕಿ, ಸಂಚು ರೂಪಿಸಿ ಮುಗಿಸುತ್ತಿದ್ದಾರೆ ಎಂದು ಜೆಡಿಎಸ್ ಕಿಡಿಕಾರಿದೆ.ಎಕ್ಸ್ನಲ್ಲಿ ಪೋಸ್ಟ್ ಹಂಚಿಕೊAಡಿದ್ದು, ಕಾಂಗ್ರೆಸ್ನಿಂದ ಮುಸ್ಲಿಂ ನಾಯಕ ಅಬ್ದುಲ್ ಜಬ್ಬರ್ ಅಮಾನತು ವಿಚಾರವಾಗಿ ಆಕ್ರೋಶ ಹೊರಹಾಕಿದೆ. ಕಾಂಗ್ರೆಸ್ ಪಕ್ಷದಲ್ಲಿ ಸಾಮಾಜಿಕ ಅನ್ಯಾಯ ನಡೆಯುತ್ತಿದೆ. ಅಂದು ಪರಿಶಿಷ್ಟ ಸಮುದಾಯದ ವಾಲ್ಮೀಕಿ ಜನಾಂಗದ ನಾಯಕ ಕೆ.ಎನ್. ರಾಜಣ್ಣ ಅವರನ್ನು ಸಚಿವ ಸ್ಥಾನದಿಂದ ಏಕಾಏಕಿ ಕಿತ್ತು ಹಾಕಿದ್ದರು. ಇಂದು ಅಲ್ಪಸಂಖ್ಯಾತ ಸಮುದಾಯದ ಮುಖಂಡ ಅಬ್ದುಲ್ ಜಬ್ಬರ್ ಅವರನ್ನು ಪಕ್ಷದಿಂದ ಉಚ್ಚಾಟಿಸಲಾಗಿದೆ. ಕುರ್ಚಿ ಆಸೆಗಾಗಿ ಡಿಕೆ ಶಿವಕುಮಾರ್ ತಮ್ಮ ವಿರೋಧಿ ಬಣದ ನಾಯಕರನ್ನು ಹೊಂಚು ಹಾಕಿ, ಸಂಚು ರೂಪಿಸಿ ಒಬ್ಬೊಬ್ಬರನ್ನೇ ಮುಗಿಸುತ್ತಿದ್ದಾರೆ ಎಂದು ಆರೋಪಿಸಿದೆ.
ಡಿಕೆಶಿ ವಿರುದ್ಧ ಜೆಡಿಎಸ್ ಕಿಡಿ



