ಬೆಂಗಳೂರು: ರಾಜರಾಜೇಶ್ವರಿ ನಗರ ಪೊಲೀಸರು ಜಾಲಹಳ್ಳಿಯ ಕಮ್ಮಗೊಂಡನಹಳ್ಳಿ ನಿವಾಸಿಯಾದ ಗಣೇಶ್ ಎಂಬವನನು ಬಂಧಿಸಿ 13 ಮೂರುವರೆ ಲಕ್ಷ ರೂಪಾಯಿ ಬೆಲೆ ಬಾಳುವ ಚಿನ್ನಾಭರಣ ಮತ್ತು ಬೆಳ್ಳಿ ಆಭರಣಗಳನ್ನು ವಶಪಡಿಸಿಕೊಂಡಿರುತ್ತಾರೆ.
ಆರೋಪಿಯು ಮಾರ್ಚ್ ತಿಂಗಳಿನಲ್ಲಿ ರಾಜರಾಜೇಶ್ವರಿ ನಗರದ ಪವಿತ್ರ ಎಂಬುವರ ಮನೆಯ ಬೀಗ ಮುರಿದು ಕಳ್ಳತನ ಮಾಡಿದ್ದನು.ಈತನಿಂದ 210 ಗ್ರಾಂ ಚಿನ್ನಾಭರಣ, 1,300 ಗ್ರಾಂ ಬೆಳ್ಳಿ ಆಭರಣಗಳನ್ನು ಹಾಗೂ ಇತರೆ ವಸ್ತುಗಳನ್ನು ವಶಪಡಿಸಿಕೊಂಡಿರುತ್ತಾರೆ.
ಈತನು ಈ ಹಿಂದೆ ಅನ್ನಪೂರ್ಣೇಶ್ವರಿ ನಗರ, ಸುಬ್ರಹ್ಮಣ್ಯಪುರ, ಚಂದ್ರ ಲೇಔಟ್ ಮತ್ತು ರಾಜರಾಜೇಶ್ವರಿ ನಗರ ಪೊಲೀಸ್ ಠಾಣ ವ್ಯಾಪ್ತಿಯಲ್ಲಿ ಮನೆ ಬೀಗ ಮುರಿದು ಕಳವು ಮಾಡಿದ ಪ್ರಕರಣಗಳು ಪತ್ತೆಯಾಗಿರುತ್ತವೆ ಎಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.