ಬೆಂಗಳೂರು: ಈಗಾಗಲೇ ಉದ್ಯೋಗಕ್ಕಾಗಿ ಧಾರವಾಡದಲ್ಲಿ ಪ್ರತಿಭಟನೆ ನಡೆಸಿದ್ದ ಉದ್ಯೋಗಾಕಾಂಕ್ಷಿಗಳು ಮತ್ತೆ ಅನಿರ್ಧಿಷ್ಠಾವಧಿ ಮುಷ್ಕರ ನಡೆಸಲು ಮುಂದಾಗಿದ್ದಾರೆ.
ಅಖಿಲ ಕರ್ನಾಟಕ ವಿದ್ಯಾರ್ಥಿಗಳ ಸಂಘದ ವತಿಯಿಂದ ನಾಳೆ ಧಾರವಾಡದ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಅನಿರ್ಧಿಷ್ಠಾವಧಿ ಹೋರಾಟ ನಡೆಸಲು ನಿರ್ಧರಿಸಿದ್ದಾರೆ.
ಆದರೆ ಪೊಲೀಸರು ವಿದ್ಯಾರ್ಥಿಗಳ ಈ ಹೋರಾಟಕ್ಕೆ ಅನುಮತಿ ನೀಡಲು ನಿರಾಕರಿಸಿದ್ದಾರೆ ಎನ್ನಲಾಗಿದೆ. ಪೊಲೀಸರ ಈ ಕ್ರಮವನ್ನು ಪ್ರಶ್ನಿಸಿ ಹೋರಾಟ ಮಾಡಲಿರುವ ವಿದ್ಯಾರ್ಥಿಗಳು ಹೈಕೋರ್ಟ್ ಮೊರೆ ಹೋಗಲು ನಿರ್ಧರಿಸಿದ್ದಾರೆ ಎನ್ನಲಾಗಿದೆ.



