ದೆಹಲಿ: ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿಯ ನ್ಯಾಯಾಲಯ ಇಂದು ಬಿಆರ್ಎಸ್ ನಾಯಕಿ ಕೆ ಕವಿತಾ ಅವರನ್ನು ಏಪ್ರಿಲ್ 23 ರವರೆಗೆ ನ್ಯಾಯಾಂಗ ಬಂಧನಕ್ಕೆ ಕಳುಹಿಸಿದೆ. ತೆಲಂಗಾಣ ಮಾಜಿ ಮುಖ್ಯಮಂತ್ರಿ ಕೆ ಚಂದ್ರಶೇಖರ್ ರಾವ್ ಅವರ ಪುತ್ರಿ ಕವಿತಾ ಅವರ ಮೂರು ದಿನಗಳ ಪೆÇಲೀಸ್ ಕಸ್ಟಡಿ ಅವಧಿ ಮುಗಿದ ಹಿನ್ನೆಲೆಯಲ್ಲಿ ಅವರನ್ನು ಇಂದು ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು.
ಬಿಆರ್ಎಸ್ ನಾಯಕನನ್ನು ಮಾರ್ಚ್ 15 ರಂದು ಜಾರಿ ನಿರ್ದೇಶನಾಲಯವು ಬಂಧಿಸಿತ್ತು. ಮತ್ತು ಪ್ರಸ್ತುತ ತಿಹಾರ್ ಜೈಲಿನಲ್ಲಿ ಇರಿಸಲಾಗಿದೆ. ಎಎಪಿ ನಾಯಕರಾದ ಮನೀಶ್ ಸಿಸೋಡಿಯಾ ಮತ್ತು ಸಂಜಯ್ ಸಿಂಗ್ ನಂತರ ಇವರನ್ನು ಬಂಧಿಸಲಾಗಿತ್ತು. ಮಾರ್ಚ್ 21ರಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ರನ್ನು ಬಂಧಿಸಲಾಗಿತ್ತು.
ದೆಹಲಿ ಮದ್ಯನೀತಿ ಹಗರಣ, ಕೆ ಕವಿತಾ ಮಧ್ಯಂತರ ಜಾಮೀನು ಅರ್ಜಿ ವಜಾ ದೆಹಲಿ ಮದ್ಯನೀತಿ ಹಗರಣದಲ್ಲಿ ಬಂಧನಕ್ಕೊಳಗಾಗಿರುವ ಬಿಆರ್ಎಸ್ ನಾಯಕಿ ಕೆ ಕವಿತಾ ಅವರ ಮಧ್ಯಂತರ ಜಾಮೀನು ಅರ್ಜಿಯನ್ನು ದೆಹಲಿಯ ರೋಸ್ ಅವೆನ್ಯೂ ನ್ಯಾಯಾಲಯ ಸೋಮವಾರ ವಜಾಗೊಳಿಸಿದೆ. ದೆಹಲಿ ಮದ್ಯ ನೀತಿ ಪ್ರಕರಣದಲ್ಲಿ ತಿಹಾರ್ ಜೈಲಿನಲ್ಲಿರುವ ಕವಿತಾಗೆ ಮಧ್ಯಂತರ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಾಲಯ ತಿರಸ್ಕರಿಸಿದೆ. ಮದ್ಯನೀತಿ ಪ್ರಕರಣದಲ್ಲಿ ಕಳೆದ ತಿಂಗಳು ಬಂಧಿಸಲಾಗಿತ್ತು.