ಬೆಂಗಳೂರು: ರೌಡಿಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿರುವ ಶಾಸಕ ಬೈರತಿ ಬಸವರಾಜ್ಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಇಂದು ನ್ಯಾಯಾಲಯದ ಮುಂದೆ ಹಾಜರುಪಡಿಸಿದಾಗ ೪೨ನೇ ಎಸಿಜೆಎಂ ನ್ಯಾಯಾಲಯ ನ್ಯಾಯಾಂಗ ಬಂಧನಕ್ಕೆ ನೀಡಿ ಆದೇಶ ಹೊರೆಡಿಸಿದೆ. ಇದುವರೆಗೂ ಸಿಐಡಿ ಕಸ್ಟಡಿಗೆ ನೀಡಿದ್ದ ನ್ಯಾಯಾಲಯ ಇಂದು ನ್ಯಾಯಾಂಗ ಬಂಧನಕ್ಕೆ ನೀಡಿದೆ.



