ನವದೆಹಲಿ: ಮಲ್ಲಿಕಾರ್ಜುನ ಖರ್ಗೆ, ಹೆಚ್.ಡಿ. ದೇವೇಗೌಡ, ಈರಣ್ಣ ಕಡಾಡಿ, ನಾರಾಯಣ್ ಅವರಿಂದ ತೆರವಾಗುವ ನಾಲ್ಕು ರಾಜ್ಯಸಭಾ ಸ್ಥಾನಗಳಿಗೆ ಚುನಾವಣಾ ದಿನಾಂಕ ಘೋಷಣೆಯಾಗಿದೆ.
ಜೂನ್ 18 ರಂದು ಚುನಾವಣೆ ನಡೆಯಲಿದ್ದು, ಅಂದೇ ಫಲಿತಾಂಶ ಹೊರಬೀಳಲಿದೆ. ಜೂನ್ 8 ಕ್ಕೆ ನಾಮಪತ್ರ ಸಲ್ಲಿಕೆಗೆ ಕಡೆಯ ದಿನಾಂಕ, ಜೂನ್ 9 ನಾಮಪತ್ರ ಪರಿಶೀಲನೆ, ಜೂನ್ 11 ನಾಮಪತ್ರ ಹಿಂಪಡೆಯಲು ಕಡೆಯ ದಿನವಾಗಿದೆ.
ಕರ್ನಾಟಕ ಸೇರಿ ಹತ್ತು ರಾಜ್ಯಗಳಲ್ಲಿ ಖಾಲಿಯಾಗಲಿರುವ ಹುದ್ದೆಗಳಿಗೆ ಚುನಾವಣೆ ನಡೆಯಲಿದೆ. ಒಟ್ಟು 24 ಸ್ಥಾನಗಳಿಗೆ ಚುನಾವಣೆ ಘೋಷಣೆಯಾಗಿದೆ.
ಜೂ.18 ರಾಜ್ಯದ ನಾಲ್ಕು ಸ್ಥಾನ ಸೇರಿ 24 ರಾಜ್ಯಸಭಾ ಸ್ಥಾನಗಳಿಗೆ ಚುನಾವಣೆ



