ರಾಮನಗರ: ಕಾವೇರಿ ನದಿಯಲ್ಲಿ ಆಟವಾಡುತ್ತಿದ್ದ ಪ್ರವಾಸಿಗರ ಮೇಲೆ ಕಾಡಾನೆ ದಾಳಿ ನಡೆಸಿರುವ ಘಟನೆ ಸಂಗಮ ಅರಣ್ಯ ಪ್ರದೇಶದ ಮೇಕೆದಾಟು ಬಳಿ ನಡೆದಿದೆ.
ಕನಕಪುರ ತಾಲೂಕಿನ ಸಂಗಮ ಅರಣ್ಯ ಪ್ರದೇಶದಲ್ಲಿ ನೀರು ಕುಡಿಯಲು ನದಿಗೆ ಬಂದ ಕಾಡಾನೆ ಏಕಾಏಕಿ ಪ್ರವಾಸಿಗರ ಮೇಲೆ ಎರಗಿದೆ. ಈ ವೇಳೆ ಪ್ರವಾಸಿಗರು ಸ್ಥಳದಿಂದ ಎದ್ನೋಬಿದ್ನೋ ಎಂದು ಓಡಿದ್ದಾರೆ. ಈ ವೇಳೆ ಓರ್ವ ಮಹಿಳೆ ಮೇಲೆ ಕಾಡಾನೆ ದಾಳಿ ನಡೆಸಿ ಅಲ್ಲಿಂದ ಕಾಡಿನೊಳಗೆ ಕಾಲ್ಕಿತ್ತಿದೆ.
ಪ್ರವಾಸಿಗರ ಮೇಲೆ ಕಾಡಾನೆ ದಾಳಿಪ್ರವಾಸಿಗರ ಮೇಲೆ ಕಾಡಾನೆ ದಾಳಿ



