ಚಳ್ಳಕೆರೆ: ಶೈಕ್ಷಣಿಕ, ಆರ್ಥಿಕ ಹಾಗೂ ಸಾಮಾಜಿಕ ಪ್ರಗತಿಗೆ ಸರ್ಕಾರಿ ಇಲಾಖೆ ಹಾಗೂ ಖಾಸಗಿ ಕ್ಷೇತ್ರಗಳಲ್ಲಿ ಅಗತ್ಯ ದಾಖಲೆಗಳ ಅಗತ್ಯವಿದ್ದು. ಈ ಸಂಬಂಧ ಕಾಡುಗೊಲ್ಲ ಸಮಾಜದ ಹೆಸರಿನಲ್ಲಿ ಜಾತಿ ಮತ್ತು ಆದಾಯ ಪ್ರಮಾಣ ಪತ್ರ ನೀಡುವಂತೆ ಕಾಡುಗೊಲ್ಲ ಸಮುದಾಯದ ಮುಖಂಡರು ತಹಶೀಲ್ದಾರ್ ಗೆ ಪ್ರಶ್ನಿಸಿದ್ದಾರೆ. ನಗರದ ತಾಲೂಕು ಕಚೇರಿ ಆವರಣದಲ್ಲಿ ಕಾಡುಗೊಲ್ಲ ಎಂದು ಜಾತ್ರಿ ಪ್ರಮಾಣ ಪತ್ರ ನೀಡುವಂತೆ ಆಗ್ರಹಿಸಿ ತಹಶೀಲ್ದಾರ್ ಕಾರು ತಡೆದು ಪ್ರತಿಭಟನೆ ನಡೆಸಿದರು.
ರಾಜ್ಯ ಕಾಡುಗೊಲ್ಲ ಸಂಘದ ಗೌರವಾಧ್ಯಕ್ಷ ಹಾಗೂ ಚಿತ್ರದುರ್ಗ ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ಮೀಸೆ ಮಹಾಲಿಂಗಪ್ಪ ಪ್ರತಿಭಟನಾಕಾರರನ್ನು ಉದ್ದೇಶಿಸಿ ಮಾತನಾಡಿ. ಸರ್ಕಾರದ ಸುತ್ತೋಲೆ ಇದ್ದರೂ ಸಹ ಚಳ್ಳಕೆರೆ ತಹಶೀಲ್ದಾರ್ ರೆಹನ್ ಪಾಷ ಕಾಡುಗೊಲ್ಲರ ಜಾತಿ ಪ್ರಮಾಣ ಪತ್ರ ಕೊಡಲು ಮೀನಾ ಮೇಶ ಎಣಿಸುತ್ತಿದ್ದಾರೆ.
ಜಿಲ್ಲಾ ಉಸ್ತುವರಿ ಸಚಿವ ಡಿ.ಸುಧಾಕರ್ ಹಾಗೂ ಶಾಸಕ ಟಿ.ರಘುಮೂರ್ತಿ ಯವರು ಹೇಳಿದರೂ ಸಹ ಅಧಿಕಾರಿಗಳು ಪ್ರಮಾಣ ಪತ್ರ ನೀಡಲು ಮುಂದಾಗುತ್ತಿಲ್ಲ. ಇಂತಹ ನಿರ್ಲಕ್ಷ ಅಧಿಕಾರಿಯನ್ನು ವಜಾಗೊಳಿಸಿ. ಕಾನೂನು ಕ್ರಮ ಕೈಗೊಳ್ಳಬೇಕೆಂದು ಅಕ್ರೋಶ ವ್ಯಕ್ತಪಡಿಸಿದ್ದಾರೆ.
ತಹಶೀಲ್ದಾರ್ ರೇಹಾನ್ ಪಾಷ ಮಾತನಾಡಿ ಮತ್ತೆ ಹೊಸದಾಗಿ ಅರ್ಜಿ ಹಾಕಿರಿ. ಬುಧವಾರ ದಿಂದ ಕೊಡುತ್ತೇನೆ ಎಂದು ಪ್ರತಿಭಟನಾಕಾರರಿಗೆ ಮಾತು ಕೊಟ್ಟರು. ಬೇರೆ ಬೇರೆ ತಾಲೂಕು ಗಳಲ್ಲಿ ಕೊಟ್ಟಿದ್ದಾರೆ. ನಮ್ಮ ತಾಲ್ಲೂಕಿನಲ್ಲಿ ಏಕೆ? ಕೊಡುತ್ತಿಲ್ಲ ಎಂಬುದೇ ನಮ್ಮ ಪ್ರಶ್ನೆಯಾಗಿದೆ ಎಂದು ಕಾಡುಗೊಲ್ಲರ ಪ್ರಶ್ನೆಯಾಗಿದೆ.
ಈ ಸಂದರ್ಭದಲ್ಲಿ ರಾಜ್ಯ ಕಾಡುಗೊಲ್ಲರ ಸಂಘದ ರಾಜ್ಯ ಗೌರವಾಧ್ಯಕ್ಷ ಮೀಸೆ ಮಹಾಲಿಂಗಪ್ಪ, ಚಳ್ಳಕೆರೆ ತಾಲೂಕು ಅಧ್ಯಕ್ಷ ಬೂದಿಹಳ್ಳಿ ರಾಜಣ್ಣ,ಕಾಡುಗೊಲ್ಲ ಸಮಾಜದ ಮುಖಂಡರಾದ ಮಾಜಿ ಜಿಲ್ಲಾಪಂಚಾಯಿತಿ ಸದಸ್ಯ ರಂಗಣ್ಣ, ಅಲ್ಲಾಪುರ ಬಸವರಾಜ್, ಜಿ.ಕೆ.ವೀರಣ್ಣ, ಶ್ರೀಕಂಠಪ್ಪ, ಬಸವರಾಜ್, ಮಂಜಣ್ಣ, ಮಲ್ಲಿಕಾರ್ಜುನ್ ಹಾಗೂ ಸಮಾಜದ ಇತರ ಮುಖಂಡರು ಉಪಸ್ಥಿತರಿದ್ದರು.