ಕಾಲಘಟ್ಟ ಸಿನಿಮಾದಲ್ಲಿ ಹೀರೋ ಆಗಿ ನಟನೆ ಮಾಡಿದ್ದೇನೆ. ಪಾತ್ರ ತುಂಬಾ ವಿಭಿನ್ನವಾಗಿದೆ. 1995 ಹಾಗೂ 2025ರಲ್ಲಿ ಎರಡು ಟೈಮ್ ನಲ್ಲಿ ನಡೆಯುವ ಕಥೆ. ನನ್ನದು 1990ರಲ್ಲಿ ಬರುವ ಪಾತ್ರ. ಮೊದಲ ಬಾರಿಗೆ ಹಳ್ಳಿ ಹುಡುಗನ ಪಾತ್ರ ಮಾಡಿದ್ದೇನೆ. ಕಿರಾತಕ ಸಿನಿಮಾದಲ್ಲಿ ಯಶ್ ಸರ್ ಮಾಡಿರುವ ಪಾತ್ರದ ರೆಫರೆನ್ಸ್ ತರ ಇದೆ. ನನ್ನ ಪಾತ್ರ ಚೆನ್ನಾಗಿ ಬಂದಿದೆ ಎಂದುಕೊಳ್ಳುತ್ತೇನೆ. ನಿರ್ಮಾಪಕರು ಕೃಷಿಕರು. ಅವರಿಗೆ ಸಿನಿಮಾ ಮೇಲೆ ಆಸಕ್ತಿ ಬಂದಿರುವುದು ಖುಷಿ ವಿಚಾರ. ನಿಮ್ಮಂತವರು ಇಂಡಸ್ಟ್ರಿಗೆ ಬೇಕುಎಂದರು ನಾಯಕ ಅಭಿದಾಸ್..
ನಿರ್ದೇಶಕ ಕೆ ಪ್ರಕಾಶಮಾತನಾಡಿ ಕಾಲಘಟ್ಟ ಚಿತ್ರಕ್ಕೆ ಆಕ್ಷನ್ ಕಟ್ ಹೇಳಿದ್ದೇನೆ. ಇಂದಿನ ಕಮರ್ಷಿಯಲ್ ಚಿತ್ರಗಳ ನಡುವೆ ಜಾನಪದ ಹಾಗೂ ಗೊರವನ ಸಂಸ್ಕೃತಿ ಇಟ್ಕೊಂಡು ಕಮರ್ಷಿಯಲ್ ಟಚ್ ಕೊಟ್ಟು ಚಿತ್ರ ಮಾಡಿದರೆ ಯಾರು ಹಣ ಹಾಕ್ತಾರೆ ಎಂಬ ಯೋಚನೆಯಲ್ಲಿಯೇ ನಿರ್ಮಾಪಕರ ಬಳಿ ಹೋದೆ. ಅವರು ಕಥೆ ಕೇಳಿ ಇಷ್ಟಪಟ್ಟರು. ಕಥೆ ಚೆನ್ನಾಗಿದೆ ಚಿತ್ರ ಮಾಡೋಣ ಎಂದು ಧೈರ್ಯ ಕೊಟ್ಟರು. ಅವರ ಧೈರ್ಯದಿಂದ ಈ ಚಿತ್ರವಾಗಿದೆ. ಅಲ್ಲಿಂದ ಶುರುವಾದ ಜರ್ನಿ ಈಗ ಚಿತ್ರ ಬಿಡುಗಡೆಗೆ ಬಂದು ನಿಂತಿದೆ. ಎಂದರು.
ಅಭಿದಾಸ್ ಹಾಗೂ ನಿತಿನ್ `ಕಾಲಘಟ್ಟ’ದ ನಾಯಕರಾಗಿ ನಟಿಸಿದ್ದು, ಮೇಘ ಮತ್ತು ಖುಷಿ ನಾಯಕಿಯರಾಗಿ ಅಭಿನಯಿಸಿದ್ದಾರೆ. ಶೋಭ್ ರಾಜ್, ಭವ್ಯ, ಪ್ರಶಾಂತ್ ಹಾಗೂ ಅನೇಕ ರಂಗಭೂಮಿ ಕಲಾವಿದರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ. ನಿರ್ದೇಶಕ ಕೆ ಪ್ರಕಾಶ್ ಅಂಬಳೆ ಕಥೆ, ಚಿತ್ರಕಥೆ ಹಾಗೂ ಸಂಭಾಷಣೆ ಬರೆದಿದ್ದಾರೆ.
ಇದು ಎರಡು `ಕಾಲಘಟ್ಟ’ ಗಳಲ್ಲಿ ನಡೆಯುವ ಕಥೆ. ಪೂರ್ವಾರ್ಧ ಮೂವತ್ತು ವರ್ಷಗಳ ಹಿಂದೆ , ದ್ವಿತೀಯಾರ್ಧ ಪ್ರಸ್ತುತ ಕಾಲಘಟ್ಟದಲ್ಲಿ ನಡೆಯುತ್ತದೆ. ಗ್ರಾಮೀಣ ಸೊಗಡಿನ ಜಾನಪದ ಕಲೆಯ ಬಗ್ಗೆ ಕೂಡ ಈ ಚಿತ್ರದಲ್ಲಿ ತೋರಿಸಲಾಗಿದೆ.
ಈ ವಾರ ತೆರೆ ಮೇಲೆ ಬರತ್ತೆ ಕಾಲಘಟ್ಟ



