This is the title of the web page
This is the title of the web page

ಕಮಲ ಪಡೆ ಸಭೆಕಮಲ ಪಡೆ ಸಭೆ ಬಿಜೆಪಿಯಿಂದ ಅಭ್ಯರ್ಥಿಗಳ ಆಯ್ಕೆಗಾಗಿ ನಾಯಕರ ಸಮಾಲೋಚನೆ

ಬೆಂಗಳೂರು: ವಿಧಾನಸಭಾ ಚುನಾವಣಾ ಹಿನ್ನೆಲೆಯಲ್ಲಿ ಪಕ್ಷದ ಅಭ್ಯರ್ಥಿಗಳ ಆಯ್ಕೆಗಾಗಿ ರಾಜ್ಯ ಬಿಜೆಪಿ ಘಟಕದ ಉನ್ನತ ಮಟ್ಟದ ನಾಯಕರ ಸಭೆ ಇಂದು ನಡೆಯುತ್ತಿದೆ.

ಬೆಂಗಳೂರು ಉತ್ತರ ತಾಲೂಕು ಆಲೂರಿನ ಖಾಸಗಿ ಹೋಟೆಲ್‍ನಲ್ಲಿ ಬಿಜೆಪಿ ಕೋರ್ ಕಮಿಟಿ ಸಭೆ ಆರಂಭಗೊಂಡಿದೆ. ಸಭೆಯಲ್ಲಿ ಪಾಲ್ಗೊಳ್ಳಲು ರಾಜ್ಯದ ವಿವಿಧೆಡೆಯಿಂದ ಜಿಲ್ಲಾ ಮಟ್ಟದ ನಾಯಕರು ಆಗಮಿಸಿದ್ದಾರೆ. ಇಂದು ನಡೆಯುವ ಸಭೆಯಲ್ಲಿ ಹಲವು ಮಹತ್ವದ ನಿರ್ಧಾರಗಳನ್ನ ಕೈಗೊಳ್ಳಲಾಗುತ್ತಿದೆ ಎಂದು ಹೇಳಲಾಗಿದೆ.

ನಿನ್ನೆ ನಡೆದ ಪಕ್ಷದ ಆಂತರಿಕ ಚುನಾವಣೆಯ ಬಗ್ಗೆ ಚರ್ಚೆ ನಡೆಯಲಿದೆ. ಕ್ಷೇತ್ರದ ಅಭ್ಯರ್ಥಿಗಳ ಪಟ್ಟಿ ಬಗ್ಗೆ ಚರ್ಚೆ ನಡೆಯಲಿದೆ.
ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್, ಸಿಎಂ ಬಸವರಾಜ ಬೊಮ್ಮಾಯಿ, ಮಾಜಿ ಸಿಎಂ ಯಡಿಯೂರಪ್ಪ, ಪಕ್ಷದ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಸೇರಿದಂತೆ ಹಲವು ನಾಯಕರು ಸಭೆಯಲ್ಲಿ ಪಾಲ್ಗೊಂಡಿದ್ದಾರೆ.

ಈ ಸಭೆಗೆ ಮಾಜಿ ಮುಖ್ಯಮಂತ್ರಿಗಳಾದ ಜಗದೀಶ್ ಶೆಟ್ಟರ್, ಡಿ.ವಿ. ಸದಾನಂದಗೌಡ, ಮಾಜಿ ಸಚಿವರಾದ ಕೆ.ಎಸ್. ಈಶ್ವರಪ್ಪ, ಲಕ್ಷ್ಮಣ ಸವದಿ ಸೇರಿದಂತೆ ಕೆಲ ಮುಖಂಡರು ಗೈರು ಹಾಜರಾಗಿದ್ದಾರೆ ಎನ್ನಲಾಗಿದೆ.

ಐದೈದು ಜಿಲ್ಲೆಗಳ ಸಭೆ ನಾಲ್ಕು ವಿಭಾಗಗಳಾಗಿ ನಡೆಯಲಿದ್ದು, ಇಂದು ಒಟ್ಟು 20 ಜಿಲ್ಲೆಗಳ ಸಭೆ ನಡೆಯಲಿದೆ ಎಂದು ಮೂಲಗಳು ತಿಳಿಸಿವೆ. ನಾಳೆಯೂ ಸಹ ಸಭೆ ಮುಂದುವರಿಯುವುದಾಗಿ ತಿಳಿದುಬಂದಿದೆ.