ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದಿರುವ ಹಗರಣಕ್ಕೆ ಸಂಬಂಧಪಟ್ಟಂತೆ ಸೂಕ್ತ ಕ್ರಮ ಜರುಗಿಸಲು ರಾಜ್ಯಪಾಲರು ಮಧ್ಯಪ್ರವೇಶಿಸುವಂತೆ ಒತ್ತಾಯಿಸುವಂತೆ ರಾಜ್ಯ ಬಿಜೆಪಿ ಘಟಕದ ವತಿಯಿಂದ ಇಂದು ರಾಜ್ಯಭವನಕ್ಕೆ ರ್ಯಾಲಿ ನಡೆಸಲಾಯಿತು. ವಿಧಾನಸೌಧದಿಂದ ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ನೇತೃತ್ವದಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಲಾಯಿತು.
ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದ ಬಿಜೆಪಿ ಶಾಸಕರು ದಲಿತರ 187 ಕೋಟಿ. ರೂ. ಹಣ ನುಂಗಿದ ಸಚಿವ ನಾಗೇಂದ್ರ ಅವರು ರಾಜೀನಾಮೆ ನೀಡಲಿ. ಧಿಕ್ಕಾರ… ಧಿಕ್ಕಾರ…ಕಾಂಗ್ರೆಸ್ ಸರ್ಕಾರಕ್ಕೆ ಧಿಕ್ಕಾರ ಎಂಬ ಘೋಷಣೆಗಳಿಂದ ಭಿತ್ತಿಪತ್ರವಿಡಿದು ರಾಜಭವನದತ್ತ ಸಾಗಿದರು.ಇದಕ್ಕೂ ಮುನ್ನಾ ಸುದ್ದಿಗಾರರೊಂದಿಗೆ ಮಾತನಾಡಿದ ವಿಜಯೇಂದ್ರ, ಹಗರಣದಲ್ಲಿ ಪಾಲ್ಗೊಂಡಿರುವ ಸಚಿವರನ್ನು ರಕ್ಷಣೆ ಮಾಡುತ್ತಿದೆ.
ಸಚಿವರು ರಾಜೀನಾಮೆಕೊಡುವವರೆಗೂ ಹೋರಾಟ ಮುಂದುವರಿಸುತ್ತೇವೆ. ಈ ಸಂಬಂಧ ರಾಜ್ಯಪಾಲರಿಗೆ ಕ್ರಮಕ್ಕೆ ಆಗ್ರಹಿಸಿ ದೂರು ನೀಡುತ್ತೇವೆ ಎಂದು ತಿಳಿಸಿದರು.ಪ್ರತಿಭಟನೆಯಲ್ಲಿ ವಿಧಾನಸಭೆ ವಿಪಕ್ಷ ನಾಯಕ ಆರ್. ಅಶೋಕ್, ಉಪನಾಯಕ ಅರವಿಂದ್ ಬೆಲ್ಲದ್, ಮಾಜಿ ಸಚಿವರಾದ ವಿ.ಸುನೀಲ್ ಕುಮಾರ್, ಬೈರತಿ ಬಸವರಾಜ್, ವಿಧಾನಪರಿಷತ್ ಸದಸ್ಯ ಎನ್. ರವಿಕುಮಾರ್ ಮತ್ತಿತರ ಮುಖಂಡರು ಶಾಸಕರು ಪಾಲ್ಗೊಂಡರು.