ಕೆ.ಆರ್.ಪುರ: `ಯಾವುದೇ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಎದುರಿಸುವ ಅಭ್ಯರ್ಥಿಗಳು ಪದವಿ ಹಂತದಿಂದಲೇ ತಯಾರಿ ಮಾಡಿಕೊಳ್ಳಬೇಕು ಎಂದು ಯುಪಿಎಸ್ಸಿ ಪರೀಕ್ಷೆಯಲ್ಲಿ ಉತ್ತಮ ಸಾಧನೆ ಮಾಡಿದ ಸಾಧಕ ಡಾ.ಭಾನುಪ್ರಕಾಶ್ ಹೇಳಿದರು.
ಕನಕ ಎಕ್ಸ್ಪ್ರೆಸ್ ಮೀಡಿಯಾ ಗ್ರೂಪ್ ಆಯೋಜಿಸಿದ್ದ `ಕುರುಬ ಸಮಾಜದ ಯುಪಿಎಸ್ಸಿ ಸಾಧಕರಿಗೆ ಸನ್ಮಾನ ಹಾಗೂ ಕೆಎಎಸ್, ಪಿಡಿಒ ಮತ್ತಿತರ ಸ್ಪರ್ಧಾತ್ಮಕ ಪರೀಕ್ಷೆಗಳ ಉಚಿತ ಕಾರ್ಯಾಗಾರ`ದಲ್ಲಿ ಅವರು ಮಾತನಾಡಿದರು.ಯುಪಿಎಸ್ಸಿ ಪರೀಕ್ಷೆಯಲ್ಲಿ ತೇರ್ಗಡೆಯಾಗುವುದು ಎಷ್ಟು ಮುಖ್ಯವೋ, ಮುಂದೆ ನಾವು ಸಮಾಜದಲ್ಲಿ ಯಾವ ರೀತಿಯಾಗಿ ಕೆಲಸ ಮಾಡುತ್ತೇವೆ ಎಂಬುದು ಅಷ್ಟೇ ಮುಖ್ಯ’ ಜನರ ಸೇವೆ ಮಾಡಲು ಅವಕಾಶ ದೊರೆತಿರುವುದು ನಮ್ಮೆಲ್ಲರ ಪುಣ್ಯ ಎಂದರು.
ಇಂಡಿಯಾ ಫಾರ್ ಐಎಎಸ್ ತರಬೇತಿ ಸಂಸ್ಥೆಯ ಶ್ರೀನಿವಾಸ್, `ಯುವ ಜನತೆ ಪದವಿ ಹಂತದಲ್ಲಿಯೇ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿ ನಡೆಸಬೇಕು. ಕೇಂದ್ರ ನಾಗರಿಕ ಸೇವೆಗಳ ಪರೀಕ್ಷೆಯಲ್ಲಿ ಕರ್ನಾಟಕದವರು ಹೆಚ್ಚಿನ ಸಂಖ್ಯೆಯಲ್ಲಿ ಆಯ್ಕೆಯಾಗಬೇಕು’ ಎಂದರು.ಸನ್ಮಾನ ಕಾರ್ಯಕ್ರಮಕ್ಕೂ ಮುನ್ನ ಕೆಎಎಸ್, ಪಿಡಿಒ ಹಾಗೂ ಇತರೆ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿ ನಡೆಸುತ್ತಿರುವ ಅಭ್ಯರ್ಥಿಗಳಿಗೆ ಉಚಿತ ಕಾರ್ಯಾಗಾರ ನಡೆಯಿತು.
ಕಾರ್ಯಾಗಾರ`ದಲ್ಲಿ ಯುಪಿಎಸ್ಸಿ ಪರೀಕ್ಷೆ ಯಲ್ಲಿ ಉತ್ತಮ ಸಾಧನೆ ಮಾಡಿದ ಡಾ.ಭಾನುಪ್ರಕಾಶ್ ಹಾಗೂ ಕೆ.ಎಲ್. ಸೂರಜ್ ಅವರನ್ನು ಸನ್ಮಾನಿಸಲಾಯಿತು.
ಕಾಗಿನೆಲೆ ಮಹಾ ಸಂಸ್ಥಾನ ಕನಕ ಗುರುಪೀಠದ ಸಿದ್ಧರಾಮಾನಂದ ಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು. ಕುರುಬ ಸಮಾಜದ ಹಿರಿಯ ಮುಖಂಡ ಕೆ.ಬಿ.ಶಾಂತಪ್ಪ, ಬೆಂಗಳೂರು ನ್ಯಾಷನಲ್ ಪಬ್ಲಿಕ್ ಸ್ಕೂಲ್ನ ಅಧ್ಯಕ್ಷ ಪಿ. ರೇವಣ್ಣ, ಬೆಂಗಳೂರು ಗ್ರಾಮಾಂತರ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಸಿದ್ದರಾಮಣ್ಣ, ನೋಂದಣಿ ಮತ್ತು ಮುದ್ರಾಂಕ ಇಲಾಖೆಯ ಲೋಕೇಶ್,
ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಪುಂಡಲೀಕ ಅನವಾಲ, ಸಿರಿ ಆಸ್ಪತ್ರೆಯ ಡಾ.ಭರತ್ ಅಂಚೆ, ದೇವರಾಜು ಅರಸು ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕ ಕಾಂತರಾಜು, ಭೂಮಾಪನ ಇಲಾಖೆಯ ಉಪನಿರ್ದೇಶಕ ಕೇಶವಮೂರ್ತಿ, ಕನಕ ಎಕ್ಸ್ಪ್ರೆಸ್ ಮೀಡಿಯಾ ಗ್ರೂಪ್ ಸಂಸ್ಥೆಯ ಸಂಸ್ಥಾಪಕ ಅಧ್ಯಕ್ಷ ಲಕ್ಷ್ಮೀಕಾಂತ ಎನ್. ತೋಂಟಾಪುರ, ಕು.ಭವಾನಿ ಎಲ್. ತೋಂಟಾಪುರ ಇದ್ದರು.