This is the title of the web page
This is the title of the web page

6ನೇ ದ್ವಿಶತಕ ಸಿಡಿಸಿದ ಕೇನ್ ವಿಲಿಯಮ್ಸನ್; ಲಂಕಾ ವಿರುದ್ಧ ಕಿವೀಸ್ ಮೇಲುಗೈ

ಶ್ರೀಲಂಕಾ ಹಾಗೂ ನ್ಯೂಜಿಲೆಂಡ್ ವಿರುದ್ಧದ ಟೆಸ್ಟ್ ಸರಣಿಯ ಎರಡನೇ ದಿನದಾಟದಲ್ಲಿ ನ್ಯೂಜಿಲೆಂಡ್ ಬ್ಯಾಟಿಂಗ್‍ನಲ್ಲಿ ಅಬ್ಬರಿಸಿದೆ. ಮೊದಲ ದಿನದಾಟ ಬಹುತೇಕ ಮಳೆಗೆ ಆಹುತಿಯಾಗಿದ್ದು ಬಳಿಕ ಬ್ಯಾಟಿಂಗ್ ಆರಂಭಿಸಿದ್ದ ನ್ಯೂಜಿಲೆಂಡ್ ಉತ್ತಮ ಬ್ಯಾಟಿಂಗ್‍ನ ಮುನ್ಸೂಚನೆ ನೀಡಿತ್ತು.

ಎರಡನೇ ದಿನದಾಟದಲ್ಲಿ ಸಂಪೂರ್ಣ ಮೇಲುಗೈ ಸಾಧಿಸುವಲ್ಲಿ ಯಶಸ್ವಿಯಾಗಿದೆ. ಅದರಲ್ಲೂ ನ್ಯೂಜಿಲೆಂಡ್ ತಂಡದ ನಾಯಕ ತನ್ನ ಅದ್ಭುತ ಫಾರ್ಮ್ ಮುಂದುವರಿಸಿದ್ದು ಈ ದ್ವಿಶತಕ ಸಿಡಿಸಿ ಅಬ್ಬರಿಸಿದ್ದಾರೆ.

ಶ್ರೀಲಂಕಾ ವಿರುದ್ಧದ ಅಂತಿಮ ಟೆಸ್ಟ್ ಪಂದ್ಯದಲ್ಲಿ ಕೇನ್ ವಿಲಿಯಮ್ಸನ್ ತಮ್ಮ 6ನೇ ಟೆಸ್ಟ್ ದ್ವಿಶತಕ ಪೂರ್ಣಗೊಳಿಸಿದ್ದಾರೆ. ಇನ್ನು ಈ ಸಂದರ್ಭದಲ್ಲಿ ನ್ಯೂಜಿಲೆಂಡ್ ತಂಡದ ಪರವಾಗಿ ಮತ್ತೊಂದು ಐತಿಹಾಸಿಕ ಸಾಧನೆ ಮಾಡಿರುವ ಕೇಮ್ ವಿಲಿಯಮ್ಸನ್ ಟೆಸ್ಟ್ ಮಾದರಿಯಲ್ಲಿ 8000 ರನ್‍ಗಳ ಮೈಲಿಗಲ್ಲು ಪೂರ್ಣಗೊಳಿಸಿದ್ದಾರೆ. ಈ ಸಾಧನೆ ಮಾಡಿದ ಮೊದಲ ಕಿವೀಸ್ ಆಟಗಾರ ಎನಿಸಿಕೊಂಡಿದ್ದಾರೆ ಕಿವೀಸ್ ಮಾಜಿ ನಾಯಕ.