ಇಂಗ್ಲೆಂಡ್ ವಿರುದ್ಧದ 5 ಪಂದ್ಯಗಳ ಟೆಸ್ಟ್ ಸರಣಿಯನ್ನು ಟೀಮ್ ಇಂಡಿಯಾ 3-1 ಅಂತರದಿಂದ ವಶಪಡಿಸಿಕೊಂಡಿದೆ. ಮೊದಲ ಪಂದ್ಯದಲ್ಲಿ ಇಂಗ್ಲೆಂಡ್ ತಂಡ ಜಯ ಸಾಧಿಸಿದರೆ, ಉಳಿದ ಮೂರು ಪಂದ್ಯಗಳಲ್ಲೂ ಟೀಮ್ ಇಂಡಿಯಾ ಬ್ಯಾಕ್ ಟು ಬ್ಯಾಕ್ ಗೆಲುವು ದಾಖಲಿಸಿದೆ. ಈ ಮೂಲಕ ಕೊನೆಯ ಪಂದ್ಯಕ್ಕೂ ಮುನ್ನವೇ ಭಾರತ ತಂಡ ಸರಣಿ ಗೆದ್ದುಕೊಂಡಿದೆ.
ಭಾರತ ಮತ್ತು ಇಂಗ್ಲೆಂಡ್ ನಡುವಣ 5ನೇ ಟೆಸ್ಟ್ ಪಂದ್ಯದಲ್ಲಿ ಟೀಮ್ ಇಂಡಿಯಾ ಪರ ಯುವ ಎಡಗೈ ದಾಂಡಿಗ ದೇವದತ್ ಪಡಿಕ್ಕಲ್ ಕಣಕ್ಕಿಳಿಯುವುದು ಬಹುತೇಕ ಖಚಿತವಾಗಿದೆ. ಧರ್ಮಶಾಲಾದಲ್ಲಿ ನಡೆಯಲಿರುವ ಇಂಗ್ಲೆಂಡ್ ವಿರುದ್ಧದ ಅಂತಿಮ ಟೆಸ್ಟ್ ಪಂದ್ಯದ ಮೂಲಕ ದೇವದತ್ ಭಾರತ ಪರ ಪಾದಾರ್ಪಣೆ ಮಾಡಲಿದ್ದಾರೆ ಎಂದು ವರದಿಯಾಗಿದೆ.
ಕಳೆದ ಮೂರು ಟೆಸ್ಟ್ ಪಂದ್ಯಗಳಲ್ಲಿ ಕಣಕ್ಕಿಳಿದಿರುವ ರಜತ್ ಪಾಟಿದಾರ್ 6 ಇನಿಂಗ್ಸ್ಗಳಿಂದ ಕಲೆಹಾಕಿದ್ದು ಕೇವಲ 63 ರನ್ಗಳು ಮಾತ್ರ. ಹೀಗಾಗಿ 5ನೇ ಟೆಸ್ಟ್ ಪಂದ್ಯದಿಂದ ಪಾಟಿದಾರ್ ಅವರನ್ನು ಕೈ ಬಿಡಲಿದ್ದಾರೆ ಎಂದು ವರದಿಯಲ್ಲಿ ತಿಳಿಸಲಾಗಿದೆ.