ದಾವಣಗೆರೆ: ದಾವಣಗೆರೆಯ ವಿಶ್ವವೀರಶೈವ ಲಿಂಗಾಯತ ಏಕೀಕರಣ ಪರಿಷತ್ ಇಂದು ನಡೆಸಿದ ಬಸವ ಜಯಂತಿ ಕಾರ್ಯಕ್ರಮದಲ್ಲಿ ಕನ್ನಡ ಸಾಹಿತ್ಯ ಪರಿಷತ್ ದತ್ತಿ ಪ್ರಶಸ್ತಿ ಪುರಸ್ಕೃತ ಸಾಹಿತಿಗಳಾದ ಡಾ. ಭೇರ್ಯ ರಾಮ ಕುಮಾರ್ ,ಹಿರಿಯ ಸಾಹಿತಿಗಳಾದ ಎನ್. ವಿ.ರಮೇಶ್, ಹಿರಿಯ ಸಾಹಿತಿ ಎಸ್.ಎನ್.ಸಂಗನಾಳ್ ಮಠ್ ಅವರೂ ಸೇರಿದಂತೆ ವಿವಿಧ ಕ್ಷೇತ್ರಗಳ ಸಾಧಕರಿಗೆ ಕಾಯಕ ಯೋಗಿ ಬಸವಶ್ರೀ ಪ್ರಶಸ್ತಿ ನೀಡಿ ಅವರುಗಳ ಸೇವೆಯನ್ನು ಗೌರವಿಸ ಲಾಯಿತು.
ಕಮ್ಮತ್ತ ಹಳ್ಳಿ ವಿರಕ್ತ ಮಠದ ಶ್ರೀ ಡಾ.ಗುರು ಬಸವ ಸ್ವಾಮೀಜಿಯವರು ಕಾರ್ಯಕ್ರಮದ ದಿವ್ಯ ಸಾನಿಧ್ಯ ವಹಿಸಿದ್ದರು.ಕರ್ನಾಟಕ ಉಚ್ಚ ನ್ಯಾಯಾಲಯದ ವಿಶ್ರಾಂತ ನ್ಯಾಯಮೂರ್ತಿ ಗಳಾದ ಅರಳಿ ನಾಗರಾಜ್ ಅವರು ಜ್ಯೋತಿ ಬೆಳಗಿಸಿ, ಬಸವಣ್ಣನವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಕಾರ್ಯಕ್ರಮ ಉದ್ಘಾಟಿಸಿದರು.
ಹಿರಿಯ ಸಾಹಿತಿ ಹಾಗೂ ನ್ಯಾಯವಾದಿಗಳಾದ ಡಾ.ರೇವಣ್ಣ ಬಳ್ಳಾರಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಶ್ರೀಮತಿ ಜಿ. ಕೆ.ಶಾಕುಂತಲ ಹಾಗೂ ಶ್ರೀಮತಿ ಕುಸುಮ ಲೋಕೇಶ್ ಬಸವಣ್ಣ ಅವರ ಜೀವನ ಹಾಗೂ ವಚನಗಳನ್ನು ಕುರಿತು ಉಪನ್ಯಾಸ ನೀಡಿದರು.ಇದೇ ಸಂದರ್ಭದಲ್ಲಿ ನ್ಯಾಯಮೂರ್ತಿ ಅರಳಿ ನಾಗರಾಜ್ ಅವರಿಗೆ ಜಗಜ್ಯೋತಿ ಬಸವಶ್ರೀ ಪ್ರಶಸ್ತಿ ನೀಡಿ ಗೌರವಿಸಲಾಯಿತು. 2004 ರ ಸಾಲಿನಲ್ಲಿ ಶೇಕಡಾ 90 ಕೂ ಹೆಚ್ಚು ಅಂಕ ಗಳಿಸಿದ 90 ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಇದೇ ಸಂದರ್ಭದಲ್ಲಿ ಪ್ರತಿಭಾ ಪುರಸ್ಕಾರ ನೀಡಲಾಯಿತು.