ಧ್ರುವ ಸರ್ಜಾ ನಟನೆಯ ‘ಏಆ’ ಚಿತ್ರ ಇಂದು ತೆರೆ ಕಾಣುತ್ತಿದೆ. ಜೋಗಿ ಪ್ರೇಮ್ ನಿರ್ದೇಶನದ ಚಿತ್ರ `ಸರ್ಸೆ ನಿನ್ನ ಸೆರಗ ಸರ್ಸೆ’ ಹಾಡಿನ ವಿವಾದದಿಂದ ರಾಷ್ಟçಮಟ್ಟದಲ್ಲಿ ಸುದ್ದಿಯಾಗಿತ್ತು. ಇದರಿಂದಾಗಿ ಚಿತ್ರಕ್ಕೆ ಸೆನ್ಸಾರ್ ಸಮಸ್ಯೆಯೂ ಎದುರಾಗಿತ್ತು. ಎಲ್ಲ ಅಡ್ಡಿಗಳನ್ನು ದಾಟಿ ಚಿತ್ರ ತೆರೆಗೆ ಬಂದಿದೆ.ಕೆವಿಎನ್ ಪ್ರೊಡಕ್ಷನ್ ನಿರ್ಮಾಣದ ಸಿನಿಮಾ ಮೂರು ವರ್ಷಗಳ ಹಿಂದೆ ಸೆಟ್ಟೇರಿತ್ತು. ಎಲ್ಲವೂ ಅಂದುಕೊಂಡಂತೆ ಆಗಿದ್ದರೆ ಕಳೆದ ವರ್ಷ ಡಿಸೆಂಬರ್ನಲ್ಲಿಯೇ ಚಿತ್ರ ಬಿಡುಗಡೆಗೊಳ್ಳಬೇಕಿತ್ತು.ರೀಷ್ಮಾ ನಾಣಯ್ಯ ಚಿತ್ರದ ನಾಯಕಿ. ಸಂಜಯ್ ದತ್, ಶಿಲ್ಪಾ ಶೆಟ್ಟಿ, ರವಿಚಂದ್ರನ್, ರಮೇಶ್ ಅರವಿಂದ್ ಮುಂತಾದವರು ಚಿತ್ರದಲ್ಲಿದ್ದಾರೆ. ಸುದೀಪ್ ಅತಿಥಿ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.
ಚಿತ್ರಕ್ಕೆ ಅರ್ಜುನ್ ಜನ್ಯ ಸಂಗೀತ, ವೀಲಿಯಂ ಡೇವಿಡ್ ಛಾಯಾಚಿತ್ರಗ್ರಹಣವಿದೆ.
ಕೇಡಿ ಇಂದು ಬಿಡುಗಡೆ



