ದೆಹಲಿ: ಕೇರಳದ ನೂತನ ಮುಖ್ಯಮಂತ್ರಿಯಾಗಿ ವಿ.ಡಿ.ಸತೀಶನ್ ಆಯ್ಕೆಯಾಗಿದ್ದಾರೆ. ದೆಹಲಿಯಲ್ಲಿ ನಡೆದ ಎಐಸಿಸಿ ಸುದ್ದಿಗೋಷ್ಠಿಯಲ್ಲಿ ಪಕ್ಷದ ಪ್ರಮುಖರು ಈ ಘೋಷಣೆಯನ್ನು ಹೊರಡಿಸಿದ್ದಾರೆ. ಕಳೆದ 10 ದಿನಗಳಿಂದ ನೂತನ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದ್ದ ಕೇರಳ ನೂತನ ಸಿಎಂ ಆಯ್ಕೆ ಪ್ರಕ್ರಿಯೆ ಇಂದು ಅಂತಿಮವಾಗಿ ನಡೆದು ಇಂದು ಸತೀಶನ್ ಅವರ ಆಯ್ಕೆಯನ್ನು ಘೋಷಿಸಲಾಗಿದೆ. ಪಕ್ಷದ ಪ್ರಮುಖರಾದ ಕೆ.ಸಿ.ವೇಣುಗೋಪಾಲ್, ರಮೇಶ್ ಚನ್ನಿತಾಲ್ ಹಾಗೂ ಸತೀಶನ್ ನಡುವೆ ಮುಖ್ಯಮಂತ್ರಿ ಪಟ್ಟಕ್ಕಾಗಿ ತೀವ್ರ ಪೈಪೋಟಿ ನಡೆದಿತ್ತು.



