ಬೆಂಗಳೂರು: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನಖರ್ಗೆ ಇಂದು ಸಂಜೆ ಬೆಂಗಳೂರಿಗೆ ಆಗಮಿಸಲಿದ್ದಾರೆ. ಮಧ್ಯಾಹ್ನ ೩.೩೦ಕ್ಕೆ ದೆಹಲಿಯಿಂದ ಹೊರಡುವ ಖರ್ಗೆ ಅವರು ಸಂಜೆ ೫.೩೦ರವೇಳೆಗೆ ಬೆಂಗಳೂರಿಗೆ ಆಗಮಿಸಲಿದ್ದಾರೆ. ಇದುವರೆಗೂ ರಾಜ್ಯ ರಾಜಕೀಯ ಬೆಳವಣಿಗೆಗಳು ದೆಹಲಿಯಲ್ಲಿ ನಡೆಯುತ್ತಿದ್ದು, ಇದೀಗ ಖರ್ಗೆ ಅವರ ಆಗಮನದಿಂದಾಗಿ ಪಕ್ಷದ ಬೆಳವಣಿಗೆಗಳು ಬಹುತೇಕ ಬೆಂಗಳೂರಿಗೆ ಸ್ಥಳಾಂತರವಾಗುವ ಲಕ್ಷಣಗಳು ಗೋಚರಿಸುತ್ತವೆ.



